ಬಂಟ್ವಾಳ : ಕಾರು ಢಿಕ್ಕಿ; ರಿಕ್ಷಾ ಚಾಲಕನಿಗೆ ಗಂಭೀರ ಗಾಯ

Update: 2023-08-29 14:39 GMT

ಬಂಟ್ವಾಳ : ಕಾರು ಹಾಗೂ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮವಾಗಿ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಿ.ಸಿ.ರೋಡ್ ಸಮೀಪದ ಲಯನ್ಸ್ ಸೇವಾ ಮಂದಿರದ ಬಳಿ ಮಂಗಳವಾರ ನಡೆದಿದೆ.

ಢಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದ್ದು, ಅಟೋ ಚಾಲಕ ಮಹಮ್ಮದ್ ಸಾದಿಕ್ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಅಮಿತಾ ಅವರು ಅಲ್ಪ ಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ.

ಕಾರು ಚಾಲಕ ಉಬೈದುಲ್ಲಾ ಎಂಬಾತನ ವಿರುದ್ಧ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News