ಬಂಟ್ವಾಳ : ಜಮೀಯ್ಯತುಲ್ ಫಲಾಹ್ ನೂತನ ಜಿಲ್ಲಾಧ್ಯಕ್ಷರಿಗೆ ಅಭಿನಂದನೆ
ಬಂಟ್ವಾಳ : ಜಮೀಯ್ಯತುಲ್ ಫಲಾಹ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧ್ಯಕ್ಷರಾಗಿ ಇತ್ತೀಚೆಗೆ ಚುನಾಯಿತರಾದ ಸಂಸ್ಥೆಯ ಬಂಟ್ವಾಳ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಕೆ. ಶಾಹುಲ್ ಹಮೀದ್ ಅವರಿಗೆ ಬಂಟ್ವಾಳ ಮಾತೃ ಘಟಕದ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಮೆಲ್ಕಾರ್ ಎಂ.ಎಚ್ ಕಾಂಪೌಂಡಿನ ಘಟಕದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಘಟಕಾಧ್ಯಕ್ಷ ರಶೀದ್ ವಿಟ್ಲ ವಹಿಸಿದ್ದರು. ಘಟಕದ ಕಾರ್ಯಕಾರಿ ಸಮಿತಿಯ ಸದಸ್ಯ ಅಬ್ದುಲ್ ರಝಾಕ್ ಅನಂತಾಡಿ ಅಭಿನಂದನಾ ಮಾತುಗಳನ್ನಾಡಿದರು.
ಈ ಸಂದರ್ಭದಲ್ಲಿ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಕೆ.ಕೆ. ಶಾಹುಲ್ ಹಮೀದ್ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.
ಬಂಟ್ವಾಳ ಘಟಕದ ಕೋಶಾಧಿಕಾರಿ ಎಂ.ಎಚ್ ಇಕ್ಬಾಲ್, ಜಿಲ್ಲಾ ಮಾಜಿ ಕೋಶಾಧಿಕಾರಿ ಎಫ್.ಎಂ. ಬಶೀರ್, ಘಟಕದ ಪೂರ್ವಾಧ್ಯಕ್ಷರುಗಳಾದ ಮೊಹಮ್ಮದ್ ರಫೀಕ್ ಹಾಜಿ ಆಲಡ್ಕ, ಆಸಿಫ್ ಇಕ್ಬಾಲ್, ನೋಟರಿ ಅಬೂಬಕ್ಕರ್ ವಿಟ್ಲ, ಎಸ್.ಎಂ. ಮೊಹಮ್ಮದ್ ಅಲಿ , ಪಿ.ಮೊಹಮ್ಮದ್ ಪಾಣೆಮಂಗಳೂರು, ಬಿ.ಮೊಹಮ್ಮದ್ ತುಂಬೆ, ಸುಲೈಮಾನ್ ಸೂರಿಕುಮೇರ್ ಉಪಾಧ್ಯಕ್ಷರಾದ ಲತೀಫ್ ನೇರಳಕಟ್ಟೆ , ಶೇಕ್ ರಹಮತುಲ್ಲಾ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಮೊಹಮ್ಮದ್ ವಳವೂರು, ಎನ್ ಮೊಹಮ್ಮದ್ ನಾರಂಕೋಡಿ, ಅಬ್ದುಲ್ ಹಕೀಂ ಕಲಾಯಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.