ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮಹಿಳೆಯ ಮೃತದೇಹ ಪತ್ತೆ
Update: 2024-09-05 16:02 GMT
ಬಂಟ್ವಾಳ : ಅಪರಿಚಿತ ಮಹಿಳೆಯ ಮೃತದೇಹ ನೇತ್ರಾವತಿ ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಗುರುವಾರ ಪತ್ತೆಯಾಗಿದೆ.
ಶಂಭೂರು ಗ್ರಾಮದಲ್ಲಿರುವ ಎ.ಎಮ್.ಆರ್.ಪವರ್ ಡ್ಯಾಂ ನ 4ನೇ ಗೇಟ್ ಬಳಿ ಸುಮಾರು 40 ವರ್ಷ ಪ್ರಾಯದ ಅಪರಿಚಿತ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಇರುವುದು ಕಂಡು ಬಂದಿದ್ದು, ನಾಗರಾಜ ಶೆಟ್ಟಿ ಎಂಬವರು ಮೃತದೇಹವನ್ನು ನೋಡಿ ಬಂಟ್ವಾಳ ಗ್ರಾಮಾಂತರ ಪೋಲೀಸರಿಗೆ ದೂರು ನೀಡಿದ್ದಾರೆ.
ಸುಮಾರು 15 ದಿನಗಳ ಹಿಂದೆ ಮಹಿಳೆ ನೀರಿಗೆ ಬಿದ್ದು ಮೃತಪಟ್ಟಿರಬಹುದು ಅಂದಾಜಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.