ಬಂಟ್ವಾಳ: ಅವಹೇಳನಕಾರಿ ಪೋಸ್ಟ್; ಆರೋಪಿ ಸೆರೆ

Update: 2024-09-03 23:04 IST
ಬಂಟ್ವಾಳ: ಅವಹೇಳನಕಾರಿ ಪೋಸ್ಟ್; ಆರೋಪಿ ಸೆರೆ
  • whatsapp icon

ಬಂಟ್ವಾಳ: ಪವಿತ್ರ ಧಾರ್ಮಿಕ ಕೇಂದ್ರವಾದ ಮಕ್ಕಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಯುವಕನೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಮಕ್ಕಾದ ಬಗ್ಗೆ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ್ದಾನೆ ಎನ್ನಲಾಗಿದ್ದು, ಸಮಾಜದಲ್ಲಿ ಧರ್ಮ, ಧರ್ಮಗಳ ಮಧ್ಯೆ ಕೋಮುಭಾವನೆಗಳನ್ನು ಕೆರಳಿಸಿ, ಅಶಾಂತಿ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಯುವಕನ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿ, ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News