ಬಂಟ್ವಾಳ : ತೌಹೀದ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಬಂಟ್ವಾಳ : ಇಲ್ಲಿನ ತೌಹೀದ್ ಆಂಗ್ಲಮಾಧ್ಯಮ ಶಾಲೆಯಲ್ಲಿ 76 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು .
ರಾಜ್ಯ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹಾಜಿ ಬಿ.ಎಚ್.ಖಾದರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಧ್ವಜಾರೋಹಣಗೈದ ದೀಪಿಕಾ ಪ್ರೌಢ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಮಹಾಬಲೇಶ್ವರ ಹೆಬ್ಬಾರ್ ಸ್ವಾತಂತ್ರ್ಯ ಸಂದೇಶ ನೀಡಿದರು. ಶಾಲಾ ಆಡಳಿತಾಧಿಕಾರಿ ಅಬ್ದುಲ್ ಸಮದ್ ಹುದವಿ ಇವರು ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದರು.
ವಿದ್ಯಾರ್ಥಿಗಳು ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಶಾಲಾ ಸಂಚಾಲಕ ಮುಹಮ್ಮದ್ ಸಗೀರ್, ಕಾರ್ಯದರ್ಶಿ ಬಿ.ಅಬ್ದುಲ್ ಖಾದರ್, ಕೋಶಾಧಿಕಾರಿ ಅಬ್ದುಲ್ ರಹಿಮಾನ್, ಹಾಗೂ ಆಡಳಿತ ಮಂಡಳಿ ಸದಸ್ಯರು , ಬಂಟ್ವಾಳ ಜುಮ್ಮಾ ಮಸೀದಿ ಅಧ್ಯಕ್ಷ ಅಹ್ಮದ್ ಶಾಫಿ ಮತ್ತು ಸದಸ್ಯರು, ಶಾಲಾ ಮುಖ್ಯ ಶಿಕ್ಷಕ ಇಬ್ರಾಹಿಂ ಸಲೀಂ ಮತ್ತು ಬೋಧಕ, ಬೋಧಕೇತರ ವೃಂದ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಮೊಹಮ್ಮದ್ ಹನೀಫ್ ಮತ್ತು ಸದಸ್ಯರು, ಕೆಳಗಿನಪೇಟೆ ಅಂಗನವಾಡಿ ಶಿಕ್ಷಕಿ, ಸಹಾಯಕಿ ಮತ್ತು ಮಕ್ಕಳು, ಬಂಟ್ವಾಳ ಜಮಾತಿನ ಸದಸ್ಯರು ಹಾಗೂ ತೌಹೀದ್ ಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವಿದ್ಯಾರ್ಥಿಗಳಾದ ನಾಝಿರಾ ಅಂಬರ್ ಸ್ವಾಗತಿಸಿ, ನಿಫಾ ವಂದಿಸಿದರು. ದಿಲ್ ಶಾದ್ ಕಾರ್ಯಕ್ರಮ ನಿರೂಪಿಸಿದರು.