ಬಂಟ್ವಾಳ : ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Update: 2023-11-18 15:16 GMT

ಬಂಟ್ವಾಳ : ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿ ಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಪುದು ನಿವಾಸಿ ಝೈನುದ್ದೀನ್ ಬಂಧಿತ ಆರೋಪಿ.

ಸಾರ್ವಜನಿಕ ಸ್ಥಳದಲ್ಲಿ ಶಾಂತಿಭಂಗ ಉಂಟು ಮಾಡುತ್ತಿದ್ದ ಕಾರಣಕ್ಕಾಗಿ 2021 ರ ಡಿ. 21 ರಂದು ಈತನ ಮೇಲೆ ಪ್ರಕರಣ ದಾಖಲಾಗಿತ್ತು. ಬಳಿಕ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಬಂಟ್ವಾಳ ಗ್ರಾಮಾಂತರ ನಿರೀಕ್ಷಕ ಶಿವಕುಮಾರ್ ಹಾಗೂ ಉಪ ನಿರೀಕ್ಷರುಗಳಾದ ಹರೀಶ್ ಮತ್ತು ಮೂರ್ತಿ ಅವರ ಮಾರ್ಗ ದರ್ಶನದಲ್ಲಿ ಸಿಬ್ಬಂದಿಗಳಾದ ರಾಧಕೃಷ್ಣ , ಪುನೀತ್ ಮತ್ತು ನಾಗನಾಥ್ ಅವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News