ಬಂಟ್ವಾಳ: ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

Update: 2023-12-24 16:12 GMT

ಬಂಟ್ವಾಳ : ಸಂಗಬೆಟ್ಟು ಸಮೀಪದ ಪುಚ್ಚಮೊಗರು ಫಲ್ಗುಣಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ಬೆಳಕಿಗೆ ಬಂದಿದೆ.

ಮೃತರನ್ನು ಕುಕ್ಕಿಪಾಡಿ ಗ್ರಾಮದ ಏರೋಡಿ ನಿವಾಸಿ ಜಾನ್ ಸಂತೋಷ್ ಡಿಸೋಜ ಎಂಬವರ ಪತ್ನಿ ವೀಟಾ ಮರಿನಾ ಡಿಸೋಜ ಎಂದು ಗುರುತಿಸಲಾಗಿದೆ.

ಇವರು ಶನಿವಾರ ಮನೆಯಿಂದ ದ್ವಿಚಕ್ರ ವಾಹನದಲ್ಲಿ ಹೊರಟು ಬಳಿಕ ನಾಪತ್ತೆಯಾಗಿದ್ದರು. ಆ ಬಳಿಕ ವಿಷಯ ತಿಳಿದು ಸ್ಥಳೀಯರು ಹುಡುಕಾಟ ನಡೆಸಿದಾಗ ಫಲ್ಗುಣಿ ಸೇತುವೆ ಮೇಲೆ ಇವರ ದ್ವಿಚಕ್ರ ವಾಹನ ಪತ್ತೆಯಾಗಿದ್ದು, ಅಗ್ನಿ ಶಾಮಕದಳ ಆಗಮಿಸಿ ಹುಡುಕಾಡಿದ್ದರು. ರವಿವಾರ ಮೃತದೇಹ ಪತ್ತೆಯಾಗಿದೆ.

ಹಣ ದುಪ್ಪಟ್ಟುಗೊಳಿಸುವ ಆಪ್ ವೊಂದರಲ್ಲಿ 21 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಗೆ ಅವರು ದೂರು ಸಲ್ಲಿಸಿದ್ದರು. ಈ ಹಿಂದೆ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದ ಇವರು ಬಳಿಕ ವಿಮಾ ಪ್ರತಿನಿಧಿಯಾಗಿ ಗುರುತಿಸಿಕೊಂಡಿದ್ದರು. ಮಕ್ಕಳು ಇಲ್ಲ ಎಂಬ ಕೊರಗು ಜೊತೆಗೆ ಆರ್ಥಿಕ ಸಂಕಷ್ಟದಿಂದಾಗಿ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News