ಬಂಟ್ವಾಳ : ಯುವಕನಿಗೆ ತಂಡದಿಂದ ಹಲ್ಲೆ; ಪ್ರಕರಣ ದಾಖಲು

Update: 2023-09-10 17:04 GMT

ನಿಸಾರ್

ಬಂಟ್ವಾಳ : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಮೈಂದಾಳ ಎಂಬಲ್ಲಿ ಶನಿವಾರ ರಾತ್ರಿ ನಡೆದಿದ್ದು, ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಂದಾಳ ನಿವಾಸಿ ನಿಸಾರ್ ಎಂಬವರಿಗೆ ಅಪರಿಚಿತ ವ್ಯಕ್ತಿಗಳ ತಂಡ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಶನಿವಾರ ರಾತ್ರಿ 9.45ರ ಸುಮಾರಿಗೆ ಅಜ್ಜಿ ಮನೆಯಿಂದ ನಿಸಾರ್ ಅವರು ರಸ್ತೆ ಬದಿ ನಡೆದುಕೊಂಡು ಮೈಂದಾಳ ಸೇತುವೆ ಬಳಿಯ ಗುರಿಮಜಲು ಎಂಬಲ್ಲಿಗೆ ತಲುಪಿದಾಗ ಅಟೋ ರಿಕ್ಷಾದ ಬಳಿ ನಿಂತಿದ್ದ 5 ಜನರ ಪೈಕಿ ಇಬ್ಬರು ನಿಸಾರ್ ಅವರನ್ನು ಅಡ್ಡ ಗಟ್ಟಿ ಹಲ್ಲೆ ನಡೆಸಿದ್ದಾರೆ. ಇದೇ ಸಂದರ್ಭ ರಿಕ್ಷಾದ ಬಳಿ ತಲವಾರು ಹಿಡಿದುಕೊಂಡು ನಿಂತಿದ್ದ ಮೂವರ ಪೈಕಿ ಓರ್ವ ನಿಸಾರ್ ಗೆ ದಾಳಿ ಮಾಡುವಂತೆ ಹೇಳುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸಂದರ್ಭ ನಿಸಾರ್ ದುಷ್ಕರ್ಮಿಗಳ ಕೈಯಿಂದ ತಪ್ಪಿಸಿ ಓಡಿ ಹೋಗಿದ್ದು, ಸ್ನೇಹಿತನಿಗೆ ಕರೆ ಮಾಡಿ ತಿಳಿಸಿ ಬಳಿಕ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News