ವಾಯುಭಾರ ಕುಸಿತ: ಎಚ್ಚರಿಕೆ ವಹಿಸಲು ದ.ಕ. ಜಿಲ್ಲಾಡಳಿತ ಸೂಚನೆ

Update: 2024-10-16 14:30 GMT

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅ.16ರಿಂದ 19ರವರೆಗೆ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಭಾರಿ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾದ್ಯತೆ ಇರುವು ದರಿಂದ ಈ ಅವಧಿಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನು ಗಾರರು ಕೂಡಲೇ ದಡ ಸೇರಬೇಕು. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಹೊಗದಂತೆ ಸಾರ್ವಜನಿಕರು/ ಪ್ರವಾಸಿಗರು ತೆರಳದಂತೆ ಎಚ್ಚರಿಕೆ ವಹಿಸಬೇಕು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

*ಯೆಲ್ಲೋ ಅಲರ್ಟ್: ದ.ಕ. ಬುಧವಾರ ಮಧ್ಯಾಹ್ನದ ಬಳಿಕ ಸಾಧಾರಣ ಮಳೆ ಸುರಿದಿದೆ. ಭಾರತೀಯ ಹವಾಮಾನ ಇಲಾಖೆ ಅ.17 ಮತ್ತು 18ರಂದು ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ದ.ಕ. ಜಿಲ್ಲಾಡಳಿತ ಕೂಡ ಅ.19ರವರೆಗೆ ಭಾರಿ ಮಳೆಯ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಕಟ್ಟೆಚ್ಚರದಿಂದ ಇರುವಂತೆ ಮೀನುಗಾರರಿಗೆ ಸೂಚಿಸಿದೆ.

ಜಿಲ್ಲೆಯಲ್ಲಿ ಬುಧವಾರ ಮಧ್ಯಾಹ್ನವರೆಗೆ ಬಿಸಿಲು ಮತ್ತು ಮೋಡ ಮುಸುಕಿದ ವಾತಾವರಣವಿತ್ತು. ಮಂಗಳೂರು ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಅಪರಾಹ್ನದ ಬಳಿಕ ಗುಡುಗು ಸಹಿತ ಮಳೆಯಾಗಿದೆ.

ಕಳೆದ ಎರಡು ದಿನಗಳಿಂದ ಆಗಾಗ ಸುರಿಯುತ್ತಿರುವ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯ ಮಾಣಿ, ಕಲ್ಲಡ್ಕ, ಬಿ.ಸಿ. ರೋಡ್ - ಗುರುವಾಯನಕೆರೆ ಹೆದ್ದಾರಿಯ ಕಾಮಗಾರಿ ಸ್ಥಳಗಳಲ್ಲಿ ಹೊಂಡಗುಂಡಿ ಕಾಣಿಸಿದೆ. ವಾಹನ ಸಂಚಾರವೂ ದುಸ್ತರವಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News