ಮಂಗಳೂರು : ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Update: 2025-03-10 17:13 IST
ಮಂಗಳೂರು : ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • whatsapp icon

ಮಂಗಳೂರು : ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಬಿಐಟಿ), ಐಇಇಇ ವಿದ್ಯಾರ್ಥಿ ಘಟಕದ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಬಿಐಟಿಯ ಅಂತಾರಾಷ್ಟ್ರೀಯ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು.

ಸ್ಪರ್ಧಾತ್ಮಕ ಕಾರ್ಯಕ್ರಮಗಳೊಂದಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ವುಮೆನ್ ಇನ್ ಇಂಜಿನಿಯರಿಂಗ್ ಬೆಂಗಳೂರು ಸೆಕ್ಸನ್ ಅಫಿನಿಟಿ ಗ್ರೂಪ್-2024ರ ಮುಖ್ಯಸ್ಥೆ ಅಶ್ವಿನಿ ಹೊಳ್ಳ ಮುಖ್ಯ ಅತಿಥಿಯಾಗಿ ಭಾಗವಹಿಸಿ, STEM ಕ್ಷೇತ್ರಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಪ್ರಾಮುಖ್ಯತೆ ಬಗ್ಗೆ ಮಾತನಾಡಿದರು.

ಗೂಗಲ್ ಕ್ಲೌಡ್‌ನ ಇಂಜಿನಿಯರ್ ನವಮಿ ಕಿಣಿ, ದಿಲ್ಲಿಯ ಸಂಯುಕ್ತಾ ಪಾವಸ್ಕರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅವರು ಟೆಕ್ ಉದ್ಯಮದಲ್ಲಿನ ತಮ್ಮ ಅನುಭವಗಳನ್ನು ಹಂಚಿಕೊಂಡರು, ಪ್ರೋಗ್ರಾಮಿಂಗ್ ಮತ್ತು ಎಂಜಿನಿಯರಿಂಗ್ ವೃತ್ತಿಜೀವನದಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ಪ್ರೇರಣೆ ಮತ್ತು ಮಾರ್ಗದರ್ಶನ ನೀಡಿದರು. ತಂತ್ರಜ್ಞಾನ ಮತ್ತು ನಾವೀನ್ಯತೆಯನ್ನು ಅಳವಡಿಸಿಕೊಳ್ಳಲು ಯುವ ಮನಸ್ಸುಗಳನ್ನು ಪ್ರೇರೇಪಿಸಿದರು.

ಸೈಮಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮವು ಪ್ರಶ್ನೋತ್ತರ ಅವಧಿಯೊಂದಿಗೆ ಮುಕ್ತಾಯಗೊಂಡಿತು. ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಅತಿಥಿಗಳ ಜೊತೆ ಸಂವಹನ ನಡೆಸಲು ಅವಕಾಶ ಕಲ್ಪಿಸಲಾಯಿತು.










 


 


 


 


Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News