ಬೆಳ್ತಂಗಡಿ: ತಹಶೀಲ್ದಾರರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಗೆ ಯತ್ನ; ಪ್ರಕರಣ ದಾಖಲು

Update: 2024-01-20 06:01 GMT

ಬೆಳ್ತಂಗಡಿ:  ಸರಕಾರಿ ಜಾಗದ ಒತ್ತುವರಿಯನ್ನು ತೆರವು ಗೊಳಿಸಲು ಬಂದಿದ್ದ ತಹಶೀಲ್ದಾರರ ಮೇಲೆ ತಂಡವೊಂದು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಗೆ ಮುಂದಾದ ಘಟನೆ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ಶನಿವಾರ ನಡೆದಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು, ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ಸರಕಾರಿ ಜಾಗ ಒತ್ತುವರಿಯಾಗಿರುವ ಬಗ್ಗೆ ಮಾಹಿತಿ ಬಂದ ಹಿನ್ನಲೆಯಲ್ಲಿ ಪರಿಶೀಲನೆಗೆಂದು ಕಂದಾಯ ನಿರೀಕ್ಷಕರೊಂದಿಗೆ ತೆರಳಿದ್ದ ವೇಳೆ ಸದ್ರಿ ಜಾಗವನ್ನು ಅಕ್ರಮ ಮಾಡಿರುವ ನಸೀರ್ ಹಾಗೂ ರೌಫ್ ಎಂಬವರು ಸೇರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯವಾಗಿ ಬೈದು ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗವುಂಟುಮಾಡಿ ಹಲ್ಲೆ ಮಾಡಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಇದೀಗ ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News