ಬೆಳ್ತಂಗಡಿ: ಬಸ್‌ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಮೃತ್ಯು

Update: 2024-02-04 14:15 GMT

ಬೆಳ್ತಂಗಡಿ: ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಸಾವನ್ನಪ್ಪಿದ ಘಟನೆ ಮಂಜೊಟ್ಟಿ ಸಮೀಪ ನಡೆದಿದೆ.

ಮೃತ ಯುವಕ ಮಂಜೊಟ್ಟಿ ಸಮೀಪದ ಪರಾರಿ ನಿವಾಸಿ ಉಮೇಶ್ ಪೂಜಾರಿ ಎಂಬವರ ಪುತ್ರ ಧರಣೇಂದ್ರ ಪೂಜಾರಿ (24) ಎಂದು ಗುರುತಿಸಲಾಗಿದೆ.

ಬೆಳ್ತಂಗಡಿ ಕಡೆಯಿಂದ ತನ್ನ ಮನೆ ಮಂಜೊಟ್ಟಿಗೆ ಮಧ್ಯಾಹ್ನ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತಿದ್ದ ವೇಳೆ ಬೆಳ್ತಂಗಡಿ ಕಡೆಗೆ ಅತೀ ವೇಗದಲ್ಲಿ ಬರುತಿದ್ದ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಸವಾರ ಬಸ್ಸಿನಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಸ್ಥಳೀಯರ ಸಹಕಾರದಿಂದ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಹೋಗುವ ಮಾರ್ಗದ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಬೆಳ್ತಂಗಡಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News