ಬೆಳ್ತಂಗಡಿ: ರಸ್ತೆ ಬದಿಯಲ್ಲಿದ್ದ ಗೂಡಂಗಡಿಯನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳು; ದೂರು ದಾಖಲು

Update: 2023-12-02 18:12 GMT

ಬೆಳ್ತಂಗಡಿ; ನಿಡ್ಲೆ ಗ್ರಾಮದ ಬೂಡುಜಾಲು ಎಂಬಲ್ಲಿ ರಸ್ತೆ ಬದಿಯಲ್ಲಿದ್ದ ಗೂಡಂಗಡಿಯನ್ನು ಕಿಡಿಗೇಡಿಗಳು ರಾತ್ರಿಯ ವೇಳೆ ಧ್ವಂಸಗೊಳಿಸಿದ ಘಟನೆ ಸಂಭವಿಸಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ನಿವಾಸಿ ಅಬ್ದುಲ್ ಅಝೀಝ್ ಎಂಬವರು ತಮ್ಮ ಜೀವನೋಪಾಯಕ್ಕಾಗಿ ರಾಜ್ಯ ಹೆದ್ದಾರಿಯ ಬದಿಯಲ್ಲಿ ಗೂಡಂಗಡಿಯನ್ನು ಹಾಕಿ ವ್ಯಾಪಾರ ನಡೆಸುತ್ತಿದ್ದರು. ಕಳೆದ ಮೂರು ವರ್ಷಗಳಿಂದ ಈ ಗೂಡಂಗಡಿ ಕಾರ್ಯ‌ ನಿರ್ವಹಿಸುತ್ತಿತ್ತು. ರಸ್ತೆ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಗೂಡಂಗಡಿಯನ್ನು ನಿರ್ಮಿಸಲಾಗಿತ್ತು.

ಎಂದಿನಂತೆ ಶುಕ್ರವಾರ ರಾತ್ರಿಯ ವೇಳೆ ಅಂಗಡಿಯನ್ನು ಮುಚ್ಚಿ ಹೋಗಿದ್ದ ಅಬ್ದುಲ್ ಅಝೀಝ್ ಶನಿವಾರ ಬೆಳಗ್ಗೆ ಬಂದು ನೋಡಿದಾಗ ಅಂಗಡಿಯನ್ನು ಧ್ವಂಸಗೊಳಿಸಿರುವುದು ಕಂಡು ಬಂದಿದೆ. ಅಂಗಡಿಯಲ್ಲಿದ್ದ ವಸ್ತುಗಳೆಲ್ಲವನ್ನು ಹೊರಗೆಳೆದು ನಾಶಗೊಳಿಸಲಾಗಿದೆ. ತಂಪು ಪಾನೀಯಗಳ ಬಾಟ್ಲಿಗಳನ್ನು ಒಡೆದು ಹಾಕಲಾಗಿದೆ. ಅಂಗಡಿಯನ್ನು ಬಹುತೇಕ ಧ್ವಂಸಗೊಳಿಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.








Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News