ಬೆಳ್ತಂಗಡಿ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯ ಕೊಲೆ

Update: 2024-08-20 12:53 GMT

ಬೆಳ್ತಂಗಡಿ: ಮನೆಯ ಅಂಗಳದಲ್ಲಿಯೇ ವ್ಯಕ್ತಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಎಸ್.ಪಿ.ಬಿ ಕಾಂಪೌಂಡಿನಲ್ಲಿ ನಡೆದಿದೆ.

ಎಸ್.ಪಿ.ಬಾಲಕೃಷ್ಣ ಭಟ್ (73) ಕೊಲೆಯಾದ ವ್ಯಕ್ತಿ.

ಮಂಗಳವಾರ ಮಧ್ಯಾಹ್ನದ ಬಳಿಕ ಘಟನೆ ಸಂಭವಿಸಿದೆ. ಕೊಲೆಗಾರರು ಯಾರು ? ಕೊಲೆಗೆ ಕಾರಣವೇನು ಎಂಬ ಬಗ್ಗೆ ಸ್ಪಷ್ಟವಾದ ಮಾಹಿತಿಗಳು ಲಭ್ಯವಾಗಿಲ್ಲ. ಈ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದು ಬರಬೇಕಿದೆ.

ಸ್ಥಳಕ್ಕೆ ಧರ್ಮಸ್ಥಳ ಠಾಣೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News