ಬೆಳ್ತಂಗಡಿ: ಗಾಂಜಾ ಮಾರಾಟ ಯತ್ನ; ಆರೋಪಿ ಸೆರೆ

Update: 2023-08-13 16:19 GMT

ಬೆಳ್ತಂಗಡಿ: ಚಾರ್ಮಾಡಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಮೂಲತಃ ಕಕ್ಕಿಂಜೆ ನಿವಾಸಿ,‌ ಪ್ರಸ್ತುತ ಬಂಟ್ವಾಳ ತಾಲೂಕು ಸಜಿಪನಡು ಗ್ರಾಮದ ನೌಫಲ್ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರನ್ನು ನೋಡಿ ಈತ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸ್ ಸಿಬ್ಬಂದಿ ಆತನನ್ನು ಬಂಧಿಸಿದ್ದಾರೆ.

ಆತನ‌ ಬಳಿ ಪ್ಲಾಸ್ಟಿಕ್ ಕೈಚೀಲದಲ್ಲಿ 150 ಗ್ರಾಂ ನಷ್ಟು ಗಾಂಜಾದ ಮೊಗ್ಗು, ಎಲೆ ಮತ್ತು ಬೀಜ ಇರುವುದನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಳ್ಳಲಾದ ವಸ್ತುಗಳ ಒಟ್ಟು ಮೌಲ್ಯ ಅಂದಾಜು 4 ಸಾವಿರ ರೂ.ಆಗಿದ್ದು, ಈ ಬಗ್ಗೆ ಎನ್‌ಡಿಪಿಎಸ್ ಕಾಯ್ದೆಯಡಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News