ಬೆಳ್ತಂಗಡಿ: ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ.

Update: 2024-10-22 17:25 GMT

ಬೆಳ್ತಂಗಡಿ: ತಾಲೂಕಿನ ಗೇರುಕಟ್ಟೆ ಎಂಬಲ್ಲಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಂಪೂರ್ಣಕೊಳೆತ ಸ್ಥಿತಿಯಲ್ಲಿ ಮೃತದೆಹವಿದ್ದು ತೋಟದಲ್ಲಿ ಕೆಲಸ ಮಾಡುವವರು ಮೃತದೇಹವನ್ನು ನೋಡಿದ್ದು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ

ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ , ಸಬ್ಇನ್ಸ್‌ಪೆಕ್ಟರ್ ಮುರಳೀಧರ್ ನಾಯ್ಕ್ ಸೇರಿದಂತೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು , ಗುರುತಿಸಲು ಅಸಾಧ್ಯವಾಗಿದೆ.

ಸ್ಥಳೀಯರೇ ಯಾರಾದರೂ ಇರಬೇಕು ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಈ ನಿಟ್ಟಿನಲ್ಲಿಯು ಪರಿಶೀಲನೆ ನಡೆಸಲಾಗುತ್ತಿದ್ದು, ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News