ಬೆಳ್ತಂಗಡಿ: ಕಾಲುಗಳನ್ನು ಕತ್ತರಿಸಿದ ರೀತಿಯಲ್ಲಿ ಚಿರತೆಯ ಶವ ಪತ್ತೆ

ಬೆಳ್ತಂಗಡಿ: ಕಾಲುಗಳನ್ನು ಕತ್ತರಿಸಿದ, ಕೊಳೆತ ರೀತಿಯಲ್ಲಿ ಚಿರತೆಯೊಂದು ಸವಣಾಲು ಗ್ರಾಮದ ಮೀಸಲು ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.
ಸ್ಥಳಕ್ಕೆ ಕಾರ್ಕಳ ಮತ್ತು ಬೆಳ್ತಂಗಡಿ ವನ್ಯಜೀವಿ ಇಲಾಖೆ ಅಧಿಕಾರಿಗಳ ತಂಡ ದೌಡಿಯಿಸಿ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ.
ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಮೀಸಲು ಅರಣ್ಯ ಪ್ರದೇಶ ಇತ್ತಿಲಪೇಲ ಎಂಬಲ್ಲಿ ಕೊಳೆತ ಸ್ಥಿತಿಯಲ್ಲಿ ಚಿರತೆಯ ಶವ ನಾಲ್ಕು ಕಾಲುಗಳನ್ನು ತುಂಡರಿಸಿದ ರೀತಿಯಲ್ಲಿ ಪತ್ತೆಯಾಗಿದ್ದು, ಎ.11 ರಂದು ಸಂಜೆ ಬೆಳ್ತಂಗಡಿ ವನ್ಯಜೀವಿ ವಿಭಾಗದ ಆರ್.ಎಫ್.ಓ ಶರ್ಮಿತಾ ಅವರಿಗೆ ಮಾಹಿತಿ ಬಂದಿತ್ತು. ಇಂದು ಬೆಳಗ್ಗೆ ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದು, ಕಾರ್ಕಳ ವನ್ಯಜೀವಿ ವಿಭಾಗದ ಹಿರಿಯ ಅಧಿಕಾರಿಗಳು ಕೂಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಚಿರತೆಯ ಶವವನ್ನು ವೈದ್ಯರು ಪರೀಕ್ಷೆ ಮಾಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ವನ್ಯಜೀವಿ ವಿಭಾಗದಲ್ಲಿ ಪ್ರಕರಣ ದಾಖಲಾಗಲಿದೆ.
ಯಾರೋ ದುಷ್ಕರ್ಮಿಗಳು ಚಿರತೆಯ ತಲೆಗೆ ಗುಂಡು ಹಾರಿಸಿ ಸಾಯಿಸಿ ಕಾಲಿನ ಉಗುರುಗಳಿಗಾಗಿ ಕಾಲನ್ನು ತುಂಡರಿಸಿಕೊಂಡು ಹೋಗಿರುವ ಬಗ್ಗೆಯೂ ಅನುಮಾನ ವ್ಯಕ್ತವಾಗುತ್ತಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.