ಬೆಳ್ತಂಗಡಿ: ರಸ್ತೆ ಅಪಘಾತದಲ್ಲಿ ನಡ ಗ್ರಾಮ ಕರಣಿಕರ ಕಚೇರಿ ಸಿಬ್ಬಂದಿ ಮೃತ್ಯು

Update: 2024-06-28 06:10 GMT

ಬೆಳ್ತಂಗಡಿ, ಜೂ.28: ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಲಾಯಿಲದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.

ಬಳಂಜ ನಿವಾಸಿ, ನಡ ಗ್ರಾಮ ಕರಣಿಕರ ಕಚೇರಿ ಸಹಾಯಕ ಜಯರಾಜ್(50) ಮೃತಪಟ್ಟವರು.

ಕಿಲ್ಲೂರಿನಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಬೆಳ್ತಂಗಡಿ ಕಡೆಯಿಂದ ನಡಕ್ಕೆ ತೆರಳುತ್ತಿದ್ದ ಬೈಕ್ ಮಧ್ಯೆ ಪುತ್ರಬೈಲು ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ತ್ರೀವ ಗಾಯಗೊಂಡಿದ್ದ ಜಯರಾಜ್ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News