ಸೆ.24ರಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ನ 'ಬಿಲ್ಲವ ಹಾಸ್ಟೆಲ್' ಉದ್ಘಾಟನೆ

Update: 2023-09-20 09:51 GMT
  • whatsapp icon

ಮಂಗಳೂರು, ಸೆ.20: ಅಖಿಲ ಭಾರತ ಬಿಲ್ಲವರ ಯೂನಿಯನ್ ವತಿಯಿಂದ ಕುಂಜತ್ತಬೈಲ್ ನಲ್ಲಿ ದಿ.ದಾಮೋದರ ಆರ್. ಸುವರ್ಣ ನೇತೃತ್ವದಲ್ಲಿ ಬಿಲ್ಲವ ಹಾಸ್ಟೆಲ್ ನಿರ್ಮಿಸಲಾಗಿದ್ದು ಸೆ.24ರಂದು ಇದು ಲೋಕಾರ್ಪಣೆಗೊಳ್ಳಲಿದೆ ಎಂದು ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ. ಸುವರ್ಣ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸುಮಾರು 5.25 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಹಾಸ್ಟೆಲ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ದೀಪ ಬೆಳಗಿಸಿ ಸಮಾರಂಭಕ್ಕೆ ಚಾಲನೆ ನೀಡಲಿದ್ದಾರೆ. ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಉದ್ಘಾಟನಾ ಸಮಾರಂಭದ ಸಭಾಧ್ಯಕ್ಷತೆಯನ್ನು ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ಚಂದ್ರ ಡಿ. ಸುವರ್ಣ ವಹಿಸಲಿದ್ದಾರೆ ಎಂದು ವಿವರಿಸಿದರು.

ಮುಖ್ಯ ಅಥಿತಿಗಳಾಗಿ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಂಸದ ನಳಿನ್ ಕುಮಾರ್ ಕಟೀಲು, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವಿ.ಸುನೀಲ್ ಕುಮಾರ್, ಉಮಾನಾಥ್ ಕೋಟ್ಯಾನ್, ವೇದವ್ಯಾಸ್ ಕಾಮತ್, ಡಾ.ವೈ.ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಮೇಯರ್ ಜಯಾನಂದ ಅಂಚನ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಮುಖ್ಯ ಸಚೇತಕ ಕೆ.ವಸಂತ ಬಂಗೇರ, ಮಾಜಿ ಶಾಸಕ ಗೋಪಾಲ ಪೂಜಾರಿ ಉಪಸ್ಥಿತರಿರಲಿದ್ದಾರೆ. ಗೌರವ ಉಪಸ್ಥಿತಿಯಲ್ಲಿ ಉದ್ಯಮಿ ಜಯರಾಮ ಬನಾನ್, ಸಣ್ಣ ಕೈಗಾರಿಕಾ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಉದಯಚಂದ್ರ ಡಿ. ಸುವರ್ಣ, ಆರ್ಯ ಈಡಿಗ ಸಂಘದ ಅಧ್ಯಕ್ಷ ತಿಮ್ಮೇಗೌಡ, ಉದ್ಯಮಿ ಜೆ.ಪಿ. ಸುಧಾಕರ್, ಬಿಲ್ಲವ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಎನ್.ಟಿ.ಪೂಜಾರಿ, ಮುಂಬೈ ಬಿಲ್ಲವ ಅಸೋಸಿಯೇಶನ್ ಅಧ್ಯಕ್ಷ ಹರೀಶ್ ಜೆ. ಅಮೀನ್, ಬೆಂಗಳೂರು ಬಿಲ್ಲವ ಅಸೋಸಿಯೇಶನ್ ಅಧ್ಯಕ್ಷ ವೇದಕುಮಾರ್, ಅಖಿಲ ಭಾರತ ಬಿಲ್ಲವರ ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ, ದುಬೈ ಬಿಲ್ಲವ ಬಳಗ-ಮಹಿಳಾ ವಿಭಾಗದ ಅಧ್ಯಕ್ಷೆ ಗೀತಾ ಸುವರ್ಣ, ಕಾರ್ಪೊರೇಟರ್ ಶರತ್ ಕುಮಾರ್ ಉಪಸ್ಥಿತರಿರಲಿದ್ದಾರೆ. ಇದೇ ಸಂದರ್ಭದಲ್ಲಿ ಉದ್ಯಮಿ ಸುಶೀರ್ ಕುಮಾರ್, ಇಂಜಿನಿಯರ್ ಬಾಬ ಅಲಂಕಾರ್ ಅವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ. ಸುವರ್ಣ, ಅಖಿಲ ಭಾರತ ಬಿಲ್ಲವರ ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ, ಸುಖಲಾಕ್ಷಿ ಸುವರ್ಣ, ಕೋಶಾಧಿಕಾರಿ ಕಾಶೀನಾಥ್, ಜೊತೆ ಕಾರ್ಯದರ್ಶಿ ಯೋಗೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಜೀವನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.


ಮಂಗಳೂರು ನಗರದಿ೦ದ 6 ಕಿ.ಮೀ. ದೂರದ ಕುಂಜತ್ತಬೈಲ್ ನ ಪ್ರಶಾಂತ ವಾತಾವರಣದಲ್ಲಿ ಸುಮಾರು 1 ಎಕರೆ ಪ್ರದೇಶದಲ್ಲಿ 5.25 ಕೋಟಿ ರೂ. ವೆಚ್ಚದಲ್ಲಿ ಈ ಹಾಸ್ಟೆಲ್ ನಿರ್ಮಿಸಲಾಗಿದ್ದು, ಬಿಲ್ಲವ ಹಾಗೂ ಹಿಂದುಳಿದ ಸಮುದಾಯದಲ್ಲಿ ಉನ್ನತ ವೃತ್ತಿ ಶಿಕ್ಷಣ ಬಯಸುವ ವಿದ್ಯಾರ್ಥಿಗಳ ಅನುಕೂಲತೆಗಾಗಿ ಹಾಸ್ಟೆಲ್ ನಿರ್ಮಿಸಲಾಗಿದೆ. ಸುಮಾರು ಐದು ಮಹಡಿಗಳ ಕಟ್ಟಡ ಇದಾಗಿದ್ದು, ಒಟ್ಟು 19,500 ಚದರ ಅಡಿ ವಿಸ್ತೀರ್ಣ ಹೊಂದಿದೆ. ನೆಲ ಅಂತಸ್ತಿನಲ್ಲಿ ಆಡಳಿತ ಕಚೇರಿ, ಗ್ರಂಥಾಲಯ ಹಾಗೂ ವಸತಿ ಕೊಠಡಿಗಳು, 1ನೇ ಹಾಗೂ 3ನೇ ಮಹಡಿಯಲ್ಲಿ ವಸತಿ ಕೊಠಡಿ ಮತ್ತು 2ನೇ ಮಹಡಿಯಲ್ಲಿ ಸಭಾಂಗಣವನ್ನು ಒಳಗೊಂಡಿದೆ. ತಳಮಹಡಿಯಲ್ಲಿ ಅಡುಗೆ ಕೋಣೆ, ಉಗ್ರಾಣ ಕೋಣೆಗಳಿವೆ. ಸುಮಾರು 100 ಮಂದಿ ವಿದ್ಯಾರ್ಥಿಗಳಿಗೆ ವ್ಯವಸ್ಥಿತವಾದ ವಸತಿ ಸೌಲಭ್ಯವಿದ್ದು, ವೃತ್ತಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

ನವೀನ್ ಚಂದ್ರ ಡಿ. ಸುವರ್ಣ,

ಅಧ್ಯಕ್ಷರು, ಅಖಿಲ ಭಾರತ ಬಿಲ್ಲವರ ಯೂನಿಯನ್

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News