ಪಂಚಾಯತ್‌ಗಳ ಬಲವರ್ಧನೆಗೆ ಬಿಜೆಪಿ ನೇತೃತ್ವದ ಎನ್ ಡಿಎ ಸರಕಾರ ಕಾರಣ: ನಳಿನ್ ಕುಮಾರ್ ಕಟೀಲ್

Update: 2024-10-05 09:10 GMT

ಮಂಗಳೂರು,ಅ.5;ಗ್ರಾಮ ಪಂಚಾಯತ್ ಗಳ ಬಲವರ್ಧನೆಗೆ ಕೇಂದ್ರದ ಬಿಜೆಪಿಯ ನರೇಂದ್ರ ಮೋದಿಯವರ ನಾಯಕತ್ವದ ಎನ್ ಡಿಎ ಸರಕಾರ ಕಾರಣ ಎಂದು ಮಾಜಿ ಸಂಸದ ಹಾಗೂ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಅವರು ಶನಿವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡ ಸುದ್ದಿ ಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಗ್ರಾಮ ಪಂಚಾಯತ್ ಗಳಿಗೆ ಕೇಂದ್ರದಿಂದ ನೇರವಾಗಿ ಅನದಾನ ಬಿಡುಗಡೆ, ನರೇಗಾ, ಸ್ವರ್ಣ ಗ್ರಾಮ ಯೋಜನೆ, ಪಂಚಾಯತ್ ಸದಸ್ಯರಿಗೆ ಗೌರವಧನ ಬಿಜೆಪಿ ನೇತೃತ್ವದ ಸರಕಾರದ ಕೊಡುಗೆ. ಕಳೆದ ಆರೂವರೆ ವರ್ಷ ಬಿಜೆಪಿ ಬೆಂಬಲಿತ ಶಾಸಕ ಕೋಟ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ ಸದಸ್ಯರಾಗಿ ಸಕ್ರೀಯರಾಗಿದ್ದರು. ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ ಕಾರಣ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಿಶೋರ್ ಕುಮಾರ್ ಬಿಜೆಪಿ ಬೆಂಬಲಿತ ಅಭ್ಯರ್ಥಿ ಯಾಗಿ ಸ್ಪರ್ಧಿಸುತ್ತಾರೆ. ಅವರನ್ನು ಬೆಂಬಲಿಸಿ ಬಿಜೆಪಿ ಯನ್ನು ಈ ಬಾರಿಯೂ ಗೆಲ್ಲಿಸಬೇಕೆಂದು ಮತದಾರರಲ್ಲಿ  ಮನವಿಮಾಡುವುದಾಗಿ ತಿಳಿಸಿದರು.

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ  ಸರಕಾರದಿಂದ ಅಭಿವೃದ್ಧಿ ಯೋಜನೆಗೆ ಹಣ ಬಿಡುಗಡೆ ಆಗುತ್ತಿಲ್ಲ. ಶಾಸಕರ ನಿಧಿಯ ಯೋಜನೆಗಳಿಗೂ ಅನುದಾನ ಬಿಡುಗಡೆ ಆಗಿಲ್ಲ. ದಸರಾ ಕಾರ್ಯಕ್ರಮದಲ್ಲೂ ಮುಖ್ಯ ಮಂತ್ರಿ ರಾಜಕೀಯ ಮಾತುಗಳನ್ನಾಡಿದ್ದಾರೆ. ಭ್ರಷ್ಟಾಚಾರ ಮಿತಿ ಮೀರಿದೆ. ಮಂತ್ರಿಯವರ ಮೇಲೆ ಎಫ್ ಐಆರ್ ದಾಖಲಾದರೂ ಅವರು ರಾಜಿನಾಮೆ ಕೊಟ್ಟಿಲ್ಲ. ಅವರು ಆ ಸ್ಥಾನದಲ್ಲಿ ಮುಂದುವರಿಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ನಿಮ್ಮ ಮುಂದಿನ ರಾಜಕೀಯ ಭವಿಷ್ಯ ಏನು ಎಂದು ಮಾಧ್ಯಮ ಪ್ರತಿನಿಧಿ ಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಪಕ್ಷದ ಕಾರ್ಯಕರ್ತನಾಗಿ ಇರುತ್ತೇನೆ. ನಾನು ವಿಧಾನ ಪರಿಷತ್ ಅಭ್ಯರ್ಥಿ ಆಕಾಂಕ್ಷಿಯಾಗಿರಲಿಲ್ಲ. ಪಕ್ಷ ನನಗೆ ಮೂರು ಬಾರಿ ಸಂಸದನಾಗುವ ಅವಕಾಶ, ರಾಜ್ಯಾಧ್ಯಕ್ಷನಾಗುವ ಅವಕಾಶವನ್ನು  ನಾನು ಯಾವುದೇ ಬೇಡಿಕೆ ನೀಡದೆ ಕೊಟ್ಟಿದೆ. ಅದಕ್ಕಾಗಿ ನಾನು ಪಕ್ಷಕ್ಕೆ ಋಣಿಯಾಗಿದ್ದೇನೆ ಮುಂದೆಯೂ ಪಕ್ಷ ಸಂಘಟನೆಯ ಕೆಲಸ ಮಾಡುತ್ತೇನೆ ಎಂದರು.

ಸುದ್ದಿಗೋಷ್ಠಿಯಲ್ಲಿ ದ.ಕ ಜಿ ಬೆಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಪ್ರದಾಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಉಪಾಧ್ಯಕ್ಷ ರಾಕೇಶ್ ರೈ, ಜಿಲ್ಲಾ ವಕ್ತಾರ ರಾಜಗೋಪಾಲ ರೈ, ವಿಧಾನ ಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ಬಿಜೆಪಿ ಜಿಲ್ಲಾ ಸಂಘದ ಕೋಶಾಧಿಕಾರಿ ಸಂಜಯ ಪ್ರಭು ಮೊದಲಾದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News