ನ. 22: ಬಿಜೆಪಿ ರಾಜ್ಯಾಧ್ಯಕ್ಷ ಮಂಗಳೂರು ಭೇಟಿ

Update: 2023-11-21 17:05 GMT

ಮಂಗಳೂರು, ನ,21: ರಾಜ್ಯ ಬಿಜೆಪಿ ನೂತನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನ.22ರಂದು ದ.ಕ.ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಳಗ್ಗೆ 10:30ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪುವ ಅವರು 11ಕ್ಕೆ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡುವರು. 11:30ಕ್ಕೆ ನಗರದ ಸಿವಿ ನಾಯಕ್ ಸಭಾಂಗಣದಲ್ಲಿ ನಡೆಯುವ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸುವರು. ಬಳಿಕ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ರಾತ್ರಿ 10:15ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News