ಬುಡೋಳಿ: ಯುವಕ ಆತ್ಮಹತ್ಯೆ

Update: 2024-07-24 07:56 GMT

ಬಂಟ್ವಾಳ, ಜು.24: ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ಬುಧವಾರ ನಡೆದಿದೆ.

ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಮೃತ ಯುವಕ.

ಸುಶಾಂತ್ ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News