ಕಾರು - ಕಂಟೈನರ್ ಢಿಕ್ಕಿ: ಓರ್ವ ಮೃತ್ಯು; ಇಬ್ಬರಿಗೆ ಗಂಭೀರ ಗಾಯ

Update: 2024-09-09 17:15 GMT

ಉಪ್ಪಿನಂಗಡಿ: ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿಯೋರ್ವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಸೆ.9ರಂದು ಸಂಜೆ ಶಿರಾಡಿ ಘಾಟಿಯ ಕೆಂಪುಹೊಳೆ ಬಳಿ ನಡೆದಿದೆ.

ಹಾಸನ ನಿವಾಸಿ ಚಂದ್ರೇಗೌಡ (50) ಮೃತ ವ್ಯಕ್ತಿ. ಅದೇ ಕಾರಿನಲ್ಲಿದ್ದ ಚಿನ್ನೇಗೌಡ (31) ಹಾಗೂ ಶೀಲಾ (40) ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರು ಕಡೆಯಿಂದ ಹಾಸನ ಕಡೆಗೆ ಹೋಗುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಕಂಟೈನರ್‌ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ರಸ್ತೆಯಲ್ಲೇ ತಿರುಗಿದ ಕಾರು ಅದರ ಹಿಂದಿದ್ದ ಹಾಸನದ ಕಡೆ ಹೋಗುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಇನ್ನೊಂದು ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News