ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿಎಂ ಸಿದ್ದರಾಮಯ್ಯ

Update: 2025-01-17 21:11 IST
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿಎಂ ಸಿದ್ದರಾಮಯ್ಯ
  • whatsapp icon

ಮಂಗಳೂರು: ಜಾತಿಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಜಾತಿ ಗಣತಿ ವರದಿಗೆ ವಿರೋಧ ಏಕೆ? ಪ್ರತಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲದೇ ವಿರೋಧ ಏಕೆ ಮಾಡುತ್ತಾರೆ. ವರದಿ ಇನ್ನೂ ಬಹಿರಂಗ ಗೊಳ್ಳದಿರುವುದರಿಂದ ಈ ಬಗ್ಗೆ ನನಗೂ ತಿಳಿದಿಲ್ಲ ಎಂದರು.

ನಮ್ಮ ಪ್ರಣಾಳಿಕೆಯಲ್ಲಿ ಜಾತಿಗಣತಿಯನ್ನು ಮಂಡಿಸಲಾಗುವುದು ಎಂದು ಜನತೆಗೆ ಭರವಸೆ ನೀಡಲಾಗಿದೆ ಎಂದರು.

ದರೋಡೆಕೋರರನ್ನು ಕೂಡಲೆ ಪತ್ತೆ ಹಚ್ಚಲು ಸೂಚನೆ

ತಲಪಾಡಿ ಕೆ.ಸಿ.ರೋಡಿನಲ್ಲಿರುವ ಕೋಟೆಕಾರ್ ಸಹಕಾರಿ ಸಂಘದಲ್ಲಿ ನಡೆದಿರುವ ದರೋಡೆ ಪ್ರಕರಣದ ಬಗ್ಗೆ ಮಾತನಾಡಿ, ದರೋಡೆಕೋರರನ್ನು ಕೂಡಲೇ ಪತ್ತೆ ಹಚ್ಚಿ ಶಿಕ್ಷೆ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಿಎಂ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News