ಸಿಸಿಬಿ ಕಾರ್ಯಾಚರಣೆ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಸೆರೆ

Update: 2023-08-05 04:02 GMT

ಮಂಗಳೂರು:“ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಶುಕ್ರವಾರ ಬಂಧಿಸಿರುವ ಘಟನೆ ವರದಿಯಾಗಿದೆ.

ಮಂಗಳೂರು ನಗರದ ಕಂಕನಾಡಿ- ಪಂಪ್ ವೆಲ್ ಪರಿಸರದಲ್ಲಿ ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಕೋಡಿಕಲ್ ನ ಮೊಹಮ್ಮದ್ ಅಝೀಝ್ (40) ಎಂಬಾತನನ್ನು ವಶಕ್ಕೆ ಪಡೆದು ಆತನಿಂದ 2 ಕೆ ಜಿ ತೂಕದ ಆಂದಾಜು ರೂ. 50,000/- ಮೌಲ್ಯದ ಗಾಂಜಾ, ಸುಝುಕಿ ಅಕ್ಸಸ್ ದ್ವಿಚಕ್ರ ವಾಹನ ಹಾಗೂ ಮೊಬೈಲ್ ಫೋನ್ ನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 1,05,000/-ಆಗಬಹುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಯ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯ ವಿರುದ್ಧ ಈ ಹಿಂದೆ 2022 ರಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿತ್ತು ಎಂದು ತಿಳಿದು ಬಂದಿದೆ.

ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಗಳಾದ ರಾಜೇಂದ್ರ ಬಿ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News