MEIF ವತಿಯಿಂದ ಶಿಕ್ಷಕರ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ

Update: 2023-09-14 22:20 IST
MEIF ವತಿಯಿಂದ ಶಿಕ್ಷಕರ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ
  • whatsapp icon

ಮಂಗಳೂರು : ಮುಸ್ಲಿಮ್ ಶಿಕ್ಷಣ ಸಂಸ್ಥೆಗಳ ಒಕ್ಕೂಟ ದ.ಕ ಮತ್ತು ಉಡುಪಿ ಜಿಲ್ಲೆ ವತಿಯಿಂದ ಕಿಂಡರ್ಗಾರ್ಟನ್ ಶಿಕ್ಷಕರ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭವು ಯೆನೆಪೋಯ ವಿದ್ಯಾಸಂಸ್ಥೆ ಜೆಪ್ಪಿನಮೊಗರಿನಲ್ಲಿ ಇಂದು ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ವಕ್ಫ್ ಸಲಹಾ ಸಮಿತಿ ದ.ಕ ಜಿಲ್ಲೆ ಇದರ ಅಧ್ಯಕ್ಷರಾದ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಆಗಮಿಸಿದ್ದರು. ವಿಜೇತರು ಹಾಗೂ ಭಾಗವಹಿಸಿದ ಎಲ್ಲಾ ಶಿಕ್ಷಕರಿಗೆ ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಉಳ್ಳಾಲ ಇದರ ಅಧ್ಯಕ್ಷರಾದ ಹಾಜಿ ಮೊಹಮ್ಮದ್ ಹನೀಫ್ ಅವರು ನೆರವೇರಿಸಿದರು.

ಅಧ್ಯಕ್ಷತೆಯನ್ನು MEIF ಅಧ್ಯಕ್ಷರಾದ ಮೂಸಬ್ಬ ಪಿ. ಬ್ಯಾರಿ ಅವರು ವಹಿಸಿದ್ದರು. ಪ್ರ.ಕಾರ್ಯದರ್ಶಿಯಾದ ರಿಯಾಝ್ ಅಹ್ಮದ್, ಕಾರ್ಯದರ್ಶಿಗಳಾದ ಜಿ.ಎಂ ಅನ್ವರ್ ಹುಸೈನ್, ಮೊಹಮ್ಮದ್ ಶಾರಿಕ್, ಕನ್ವೀನರ್ ಅಬ್ದುಲ್ ರಝಾಕ್ , ಯೆನೆಪೋಯ ವಿದ್ಯಾ ಸಂಸ್ಥೆಯ Coordinator ಇವೆಟ್ ಪೆರೇರಾ ಉಪಸ್ಥಿತರಿದ್ದರು.

ಕಾರ್ಯಾಗಾರದಲ್ಲಿ ಒಟ್ಟು 56 ವಿದ್ಯಾ ಸಂಸ್ಥೆಗಳ 211 ಪ್ರತಿನಿಧಿಗಳು ಭಾಗವಹಿಸಿದ್ದರು. ಯೆನೆಪೋಯ ವಿದ್ಯಾ ಸಂಸ್ಥೆಯ ಕೃಷಾ ಕಾರ್ಯಕ್ರಮ ನಿರೂಪಿಸಿದರು.




 


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News