ದ.ಕ.ಜಿಲ್ಲಾ ಕಾಂಗ್ರೆಸ್-ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ
ಮಂಗಳೂರು, ಸೆ.9: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ವತಿಯಿಂದ ಜಿಲ್ಲೆಯ ವಿವಿಧ ಗ್ರಾಪಂಗಳ ಕಾಂಗ್ರೆಸ್ ಅಧ್ಯಕ್ಷ, ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮವು ಶನಿವಾರ ಮಲ್ಲಿಕಟ್ಟೆಯ ನಗರದ ಕಾಂಗ್ರೆಸ್ ಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಗ್ರಾಪಂ ಸದಸ್ಯರು ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಗ್ರಾಪಂನಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರಿಗೆ ಜವಾಬ್ದಾರಿಯಿದೆ. ತಮ್ಮ ಅವಧಿಯಲ್ಲಿ ರಜಾದಿನ ಹೊರತಾಗಿ ಪ್ರತಿ ದಿನ ಗ್ರಾಪಂಗೆ ಭೇಟಿ ನೀಡುತ್ತಿರಬೇಕು. ಜನರ ಪ್ರೀತಿ, ವಿಶ್ವಾಸ ಗಳಿಸಿದರೆ ಮಾತ್ರ ಗ್ರಾಪಂ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯ. ಗ್ರಾಪಂ ಸದಸ್ಯರ ಗೌರವಧನ ಹೆಚ್ಚಿಸಲು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಶ್ರಮಿಸಿದ್ದಾರೆ. ಮುಂದಿನ ಅಧಿವೇಶನಲ್ಲಿ ಗ್ರಾಪಂ ಸದಸ್ಯರ ಬೇಡಿಕೆ, ಕುಂದುಕೊರತೆಗಳ ಬಗ್ಗೆ ಚರ್ಚಿಸುತ್ತಾರೆ ಎಂದರು.
ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿ, ಗ್ರಾಪಂನಲ್ಲಿ ಅಧ್ಯಕ್ಷರೇ ಮುಖ್ಯಮಂತ್ರಿಗಳು. ತಮ್ಮ ಅಧಿಕಾರ ವ್ಯಾಪ್ತಿಯನ್ನು ತಿಳಿದುಕೊಂಡರೆ ಮಾತ್ರ ಅಧಿಕಾರ ಚಲಾವಣೆ ಮಾಡಲು ಸಾಧ್ಯ. ಚುನಾಯಿತ ಪ್ರತಿನಿಧಿಗಳು ಪಂಚಾಯತ್‌ನಲ್ಲಿ ನಾಯಕತ್ವನ್ನು ವಹಿಸಿಕೊಂಡು ಜನರಿಗೆ ಸ್ಪಂದಿಸಬೇಕು. ನೀವು ನಾಯಕರಾದರೆ ಪಕ್ಷ ಕಟ್ಟಲು ಸಾಧ್ಯ. ಮುಂದಿನ ದಿನಗಳಲ್ಲಿ ಗ್ರಾಪಂ ಚುನಾಯಿತ ಪ್ರತಿನಿಧಿಗಳು ಹಾಗೂ ಸ್ಪರ್ಧಿಸಿದವರನ್ನು ಆಹ್ವಾನಿಸಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಜಿಲ್ಲಾ ಮಟ್ಟದ ಸಂವಾದವನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರಾದ ಎಂ.ಎಸ್.ಮುಹಮ್ಮದ್, ಮಮತಾ ಗಟ್ಟಿ, ಪದ್ಮರಾಜ್ ಆರ್, ಲಾರೆನ್ಸ್ ಡಿಸೋಜ, ಶಾಹುಲ್ ಹಮೀದ್, ಜೋಕ್ಕಿಂ ಡಿಸೋಜ, ಸುರೇಂದ್ರ ಕಾಂಬ್ಳಿ, ನಾಗೇಶ್ ಕುಮಾರ್, ಸತೀಶ್ ಕಾಶಿಪಟ್ಣ, ಸುದೀಪ್ ಕುಮಾರ್ ಶೆಟ್ಟಿ, ಶುಭೋದಯ ಆಳ್ವ, ಅಶ್ವಿನ್ ರಾಜ್, ಸಂದೇಶ್ ಶೆಟ್ಟಿ, ವಿಶ್ವಾಸ್ ಶೆಟ್ಟಿ, ಸಂದೇಶ್ ಶೆಟ್ಟಿ, ಯಶವಂತ ಗುರುಪುರ, ರೇಖಾ ಶೆಟ್ಟಿ ಮುಲ್ಕಿ, ಲೀಲಾ ಮನಮೋಹನ್ ಸುಳ್ಯ, ಜಯಪ್ರಕಾಶ್ ಸುಳ್ಯ, ಗಂಗಾಧರ್ ಶೆಟ್ಟಿ ಕಡಬ, ಪದ್ಮನಾಭ ಪೂಜಾರಿ, ಸಂತೋಷ್ ಕುಮಾರ್ ಶೆಟ್ಟಿ, ನೀಜ್‌ಚಂದ್ರ ಪಾಲ್, ನಝೀರ್ ಬಜಾಲ್, ಗಣೇಶ್ ಪೂಜಾರಿ, ವಿಕಾಶ್ ಶೆಟ್ಟಿ, ಮಲ್ಲಿಕಾ ಪಕ್ಕಳ, ಶಾಂತಳಾ ಗಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ದ.ಕ.ಜಿಲ್ಲಾಧ್ಯಕ್ಷ ಶುಭಾಶ್ಚಂದ್ರ ಶೆಟ್ಟಿ ಕೊಳ್ನಾಡ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಂಚಾಯತ್ ರಾಜ್ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಕೊಲ್ಯ ಸ್ವಾಗತಿಸಿದರು. ಸಂತೋಷ್ ಕುಮಾರ್ ಭಂಡಾರಿ ಪುತ್ತೂರು ವಂದಿಸಿದರು. ಅಬ್ದುರ‌್ರಝಾಕ್ ಇರಾ ಕಾರ್ಯಕ್ರಮ ನಿರೂಪಿಸಿದರು.