ಜಾತಿ, ಮತ ಬೇಧವಿಲ್ಲದೆ ಎಲ್ಲರೂ ಒಟ್ಟಾಗಿರುವುದೇ ಕಾಂಗ್ರೆಸ್ ಪಕ್ಷದ ಧ್ಯೇಯ: ಅಶೋಕ್ ರೈ

Update: 2023-10-04 13:35 GMT

ಪುತ್ತೂರು: ಕಾಂಗ್ರೆಸ್ ಪಕ್ಷವು ಸರ್ವ ಧರ್ಮೀಯರನ್ನೂ ಸಮಾನವಾಗಿ ಕಾಣುತ್ತಿದ್ದು, ಶಾಂತಿ ಮತ್ತು ಸೌಹಾರ್ದತೆ ಯೊಂದಿಗೆ ಎಲ್ಲರ ಅಭಿವೃದ್ಧಿಯನ್ನು ಬಯಸುತ್ತದೆ. ಜಾತಿ, ಧರ್ಮ ಭೇದವಿಲ್ಲದೆ ಎಲ್ಲರನ್ನೂ ಒಟ್ಟಿಗೇ ಸೇರಿಸುವುದೇ ಕಾಂಗ್ರೆಸ್ ಪಕ್ಷದ ಧ್ಯೇಯವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ಅವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪುತ್ತೂರು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ನನ್ನ ಟ್ರಸ್ಟ್ ಮೂಲಕ ನಿವೇಶನಕ್ಕೆ ಅರ್ಜಿ ಹಾಕಿದ ಸುಮಾರು 600 ಮಂದಿಗೆ ಶೀಘ್ರದಲ್ಲೇ ಮನೆ ನಿರ್ಮಾಣಕ್ಕೆ ಜಾಗ ನೀಡಲಾಗುವುದು ಇದಕ್ಕಾಗಿ ವಿಟ್ಲದಲ್ಲಿ 7 ಎಕ್ರೆ ಜಾಗವನ್ನು ಖರೀದಿ ಮಾಡಲಾಗಿದ್ದು, ವಿಟ್ಲ, ಪುಣಚ ಭಾಗದ ಮನೆ ಇಲ್ಲದ ಬಡವರಿಗೆ ಅದನ್ನು ವಿತರಣೆ ಮಾಡಲಾಗುವುದು. ತೀರಾ ಆರ್ಥಿಕ ಸಂಕಷ್ಟದಲ್ಲಿದ್ದವರಿಗೆ ದಾನಿಗಳ ಸಹಾಯದಲ್ಲಿ ಅವರಿಗೆ ಮನೆ ನಿರ್ಮಿಸುವ ಯೋಜನೆಯಿದೆ ಎಂದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಸ್ವನಾಥ ರೈ ಮಾತನಾಡಿ ಕಾಂಗ್ರೆಸ್ ಪಕ್ಷದ ಓಟು ಬ್ಯಾಂಕ್ ಆಗಿರುವ ಅಲ್ಪಸಂಖ್ಯಾತರು ಎಂದೆಂದೂ ಕಾಂಗ್ರೆಸ್‍ಗೆ ಬೆಂಬಲ ನೀಡುವವರೇ ಆಗಿದ್ದಾರೆ. ಅಲ್ಪಸಂಖ್ಯಾತರ ಅಭಿವೃದ್ದಿಗಾಗಿ ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಇದರ ಪ್ರಯೋಜನವನ್ನು ಪ್ರತೀಯೊಬ್ಬರೂ ಪಡೆದುಕೊಳ್ಳಬೇಕು ಎಂದು ಹೇಳಿದರು.

ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದಾಲಿ ಮಾತನಾಡಿ ಅಲ್ಪಸಂಖ್ಯಾತರು ಭಯದಿಂದ ಬದುಕುವ ವಾತಾವರಣವಿತ್ತು. ಕಾಂಗ್ರೆಸ್ ಸರಕಾರ ಬಂದ ಮೇಲೆ ಇದೀಗ ಭಯದ ವಾತಾವರಣ ಬದಲಾಗಿದೆ, ಮುಂದಿನ ದಿನಗಳಲ್ಲಿ ಸರಕಾರ ಅಲ್ಪಸಂಖ್ಯಾತರ ಅಭಿವೃದ್ದಿಗೆ ಇನ್ನೂ ಹೆಚ್ಚಿನ ಅನುದಾನವನ್ನು ನೀಡಲಿದೆ ಎಂದು ಹೇಳಿದರು.

ಪುತ್ತೂರು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ವಿಎಚ್‍ಎ ಶಕೂರ್ ಹಾಜಿ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಕಾಂಗ್ರೆಸ್ ಮುಖಂಡರಾದ ಮುರಳೀಧರ್ ರೈ ಮಠಂತಬೆಟ್ಟು, ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು, ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಅಮಲರಾಮಚಂದ್ರ, ಬಿ.ಎ.ಶಕೂರ್ ಹಾಜಿ, ನೂರುದ್ದೀನ್ ಸಾಲ್ಮರ, ಮುಸ್ತಫಾ ಹಾಜಿ ಸುಳ್ಯ ಮತ್ತಿತರರು ಉಪಸ್ಥಿತರಿದ್ದರು. 

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News