ನಾಳೆ (ಫೆ.17) ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

Update: 2024-02-16 14:28 GMT

ಮಂಗಳೂರು: ನಗರದ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಫೆ.17 ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯ ಮಟ್ಟದ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ರಾಜ್ಯ ನಾಯಕರು ಹಾಗೂ ಕಾರ್ಯಕರ್ತರು ಆಗಮಿಸಲಿರುವ ಹಿನ್ನೆಲೆಯಲ್ಲಿ ವಾಹನಗಳ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.

ಸುಗಮ ಸಂಚಾರಕ್ಕೆ ಮತ್ತು ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ 73ರ ರಸ್ತೆಯಲ್ಲಿ ಸಂಚರಿಸುವ ಘನ ವಾಹನಗಳ ಸಂಚಾರದ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ . ಸಮಾವೇಶಕ್ಕೆ ಆಗಮಿಸುವ ಕಾರ್ಯಕರ್ತರ ವಾಹನಗಳನ್ನು ನಿಲ್ಲಿಸಲು ಸ್ಥಳಗಳನ್ನು ನಿಗದಿಪಡಿಸಲಾಗಿದೆ.

ವಿವರ ಇಂತಿವೆ:

►ಉಡುಪಿ ಕಡೆಯಿಂದ ಮಂಗಳೂರು ನಗರದ ಮೂಲಕ ಬಿ.ಸಿ.ರೋಡ್ / ಬೆಂಗಳೂರು ಕಡೆಗೆ ಸಂಚರಿಸುವ ಘನ ವಾಹನಗಳು ನಂತೂರು-ಪಂಪ್‌ವೆಲ್-ತೊಕ್ಕೊಟ್ಟು-ಮುಡಿಪು-ಮೆಲ್ಕಾರ್ ಮೂಲಕ ಸಂಚರಿಸುವುದು.

►ಬೆಂಗಳೂರು / ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ಘನ ವಾಹನಗಳು ಮೆಲ್ಕಾರ್‌-ಮುಡಿಪು-ತೊಕ್ಕೊಟ್ಟು-ಪಂಪ್‌ವೆಲ್ ಮೂಲಕ ಸಂಚರಿಸುವಂತೆ ಸೂಚಿಸಲಾಗಿದೆ. ಈ ತಾತ್ಕಾಲಿಕ ಸಂಚಾರ ಮಾರ್ಪಾಡು ಫೆ.17ರಂದು ಬೆಳಗ್ಗೆ 9:00 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ಊರ್ಜಿತದಲ್ಲಿರುತ್ತದೆ.

ವಾಹನ ಪಾರ್ಕಿಂಗ್ ಸ್ಥಳಗಳ ವಿವರ

►ಬಂಟ್ವಾಳ ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಗಣ್ಯರ ಕಾರುಗಳು ಹಾಗೂ ದ್ವಿಚಕ್ರ ವಾಹನಗಳಿಗೆ ಕಾಮತ್ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ.

►ಬಂಟ್ವಾಳ ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರ ಕಾರುಗಳಿಗೆ ಅಡ್ಯಾರ್‌ನ ಕರ್ಮಾರ್ ಮೈದಾನದಲ್ಲಿ ಪಾರ್ಕಿಂಗ್ ಸೌಲಭ್ಯ.

►ಬಂಟ್ವಾಳ ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಬಸ್ ಗಳು ಕಾರ್ಯಕರ್ತರನ್ನು ಕಾಮತ್ ಪಾರ್ಕಿಂಗ್ ಬಳಿ ಇಳಿಸಿ ಅಲ್ಲಿಂದ ಮುಂದುವರಿದು ಕಣ್ಣೂರಿನಲ್ಲಿ ಯೂ ಟರ್ನ್ ಮಾಡಿ ಮೋತಿಶ್ಯಾಮ್/ಷಾ ಮೈದಾನದಲ್ಲಿ ಪಾರ್ಕಿಂಗ್ ಮಾಡಬೇಕಾಗಿದೆ.

►ಮಂಗಳೂರು ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಗಣ್ಯರ ಕಾರುಗಳಿಗೆ ಅಡ್ಯಾರ್ ಗಾರ್ಡನ್‌ನಲ್ಲಿ ಪಾರ್ಕಿಂಗ್ ಮಾಡುವಂತೆ ಸೂಚಿಸಲಾಗಿದೆ.

►ಮಂಗಳೂರು ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಬಸ್ ಗಳ ಚಾಲಕರು ಕಾರ್ಯಕರ್ತರನ್ನು ಅಡ್ಯಾರ್ ಗಾರ್ಡನ್ ಮುಂಭಾಗ ಇಳಿಸಿ ಸೋಮನಾಥಕಟ್ಟೆಯಲ್ಲಿ ಯೂ ಟರ್ನ್ ಮಾಡಿ ಕಣ್ಣೂರು ಮಸೀದಿ ಬಳಿ ಇರುವ ಷಾ ಮೈದಾನದಲ್ಲಿ ಪಾರ್ಕಿಂಗ್ ಮಾಡಬೇಕಾಗಿದೆ.

►ಮಂಗಳೂರು ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ದ್ವಿಚಕ್ರ ವಾಹನಗಳನ್ನು ಅಡ್ಯಾರ್ ಗಾರ್ಡನ್ ಮೈದಾನದಲ್ಲಿ ಪಾರ್ಕಿಂಗ್ ಮಾಡುವುದು. ಅಡ್ಯಾರ್ ಕಟ್ಟೆಯಲ್ಲಿರುವ ಜಯಶೀಲರವರ ಮೈದಾನದಲ್ಲಿ ಕೂಡಾ ಪಾರ್ಕಿಂಗ್ ಮಾಡಲು ಅವಕಾಶ ಮಾಡಿಕೊಡಲಾಗಿದೆ ಎಂದು ಮಂಗಳೂರು ನಗರ ಪೊಲೀಸರ ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News