ಆದ್ಯತೆಯ ಮೇಲೆ ರೈಲ್ವೆ ಬ್ಯಾರಿಕೇಡ್ ನಿರ್ಮಾಣ: ಈಶ್ವರ ಖಂಡ್ರೆ

Update: 2023-10-05 14:43 GMT

ಬೆಂಗಳೂರು, ಅ.5: ದ.ಕ.ಜಿಲ್ಲೆಯ ಕಡಬ ತಾಲೂಕಿನ ಐತೂರು, ಕೊಣಾಜೆ, ಸುಬ್ರಹ್ಮಣ್ಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಮರಳಿಸುವಂತೆ ಮತ್ತು ಮರಳಿ ನಾಡಿಗೆ ಬಾರದಂತೆ ಕ್ರಮ ಕೈಗೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು.

ಬೆಂಗಳೂರಿನ ವಿಕಾಸಸೌಧದ ಕಚೇರಿಯಲ್ಲಿ ಗುರುವಾರ ತನ್ನನ್ನು ಭೇಟಿ ಮಾಡಿದ ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರಿಂದ ಮನವಿ ಸ್ವೀಕರಿಸಿದ ಸಚಿವರು, ಈ ವರ್ಷ ಮಳೆಯ ಪ್ರಮಾಣ ಕಡಿಮೆ ಆಗಿರುವ ಕಾರಣ ನೀರು, ಆಹಾರ ಅರಸಿ ಆನೆಗಳು ಕಾಫಿ ತೋಟಗಳಿಗೆ ಬರುತ್ತಿವೆ. ಆನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರೀಕೇಡ್ ನಿರ್ಮಾಣವೇ ಪರಿಹಾರವಾಗಿದೆ. ಆದ್ಯತೆಯ ಮೇಲೆ ಈ ಕಾರ್ಯ ಮಾಡಲಾಗುವುದು ಎಂದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News