ಅ.29ರಂದು ಕೇಂದ್ರ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಜನಾಂದೋಲನ ರೂಪಿಸಲು ಸಮಾವೇಶ

Update: 2023-10-28 13:49 GMT

ಮಂಗಳೂರು: ಕೇಂದ್ರ ಸರಕಾರದ ರೈತ ಕಾರ್ಮಿಕ ವಿರೋಧಿ ಹಾಗೂ ಜನವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು, ವಿದ್ಯುತ್ ಹಾಗೂ ರೈಲ್ವೇ ಖಾಸಗೀಕರಣದ ವಿರುದ್ಧ ಪ್ರಬಲ ಜನಾಂದೋಲನ ರೂಪಿಸಲು ಹಾಗೂ ಜನಪರ ಪರ್ಯಾಯ ನೀತಿಗಳಿ ಗಾಗಿ ಆಗ್ರಹಿಸಿ ಅ. 29ರಂದು ಬೆಳಗ್ಗೆ 10ಕ್ಕೆ ನಗರದ ಬಲ್ಮಠದಲ್ಲಿರುವ ಬಿಷಪ್ ಜತ್ತನ್ನ ಸಭಾಂಗಣದಲ್ಲಿ ರೈತ ಕಾರ್ಮಿಕ ವಿದ್ಯಾರ್ಥಿ ಯುವಜನ ಮಹಿಳಾ ದಲಿತ ಆದಿವಾಸಿ ಹಾಗೂ ಜನಪರ ಸಂಘಟನೆಗಳ ದ.ಕ.ಜಿಲ್ಲಾ ಮಟ್ಟದ ಜಂಟಿ ಸಮಾ ವೇಶವು ಜರುಗಲಿದೆ ಎಂದು ರೈತ ಕಾರ್ಮಿಕ ಜನಪರ ಸಂಘಟನೆಗಳ ಒಕ್ಕೂಟ ತಿಳಿಸಿದೆ.

ಕೇಂದ್ರದ ನರೇಂದ್ರ ಮೋದಿ ಸರಕಾರವು ನಿತ್ಯನಿರಂತರವಾಗಿ ಕಾರ್ಪೊರೇಟ್ ಪರ ನೀತಿಗಳನ್ನು ಜಾರಿಗೊಳಿಸುತ್ತಿದೆ. ದೇಶಕ್ಕೆ ಅನ್ನ ನೀಡುವ ರೈತರ ಬದುಕಿಗೆ ಮಾರಕವಾಗುವ ಕಾನೂನುಗಳನ್ನು ಜಾರಿಗೊಳಿಸಲು ಸತತ ಪ್ರಯತ್ನ ನಡೆಸುವ ಕೇಂದ್ರ ಸರಕಾರ ದೇಶದ ಕ್ರಷಿ ವ್ಯವಸ್ಥೆಯನ್ನೇ ಬುಡಮೇಲುಗೊಳಿಸುತ್ತಿದೆ. ಈ ನಿಟ್ಟಿನಲ್ಲಿ ನವೆಂಬರ್ ತಿಂಗಳಲ್ಲಿ ದೇಶಾ ದ್ಯಂತ ಬ್ರಹತ್ ಹೋರಾಟ ನಡೆಯಲಿದ್ದು, ಅದರ ವ್ಯಾಪಕ ತಯಾರಿಗಾಗಿ ಹಲವು ವಿಧದ ಕಾರ್ಯಕ್ರಮ ಹೋರಾಟಗಳನ್ನು ದ.ಕ.ಜಿಲ್ಲೆಯಲ್ಲಿಯೂ ಹಮ್ಮಿಕೊಳ್ಳಲಾಗಿದೆ.

ಸಮಾವೇಶದಲ್ಲಿ ಪ್ರಧಾನ ಭಾಷಣಕಾರರಾಗಿ ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಹಾಗೂ ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಬಿ.ಅಮ್ಜದ್ ಭಾಗವಹಿಸಲಿದ್ದಾರೆ. ಜಂಟಿ ವೇದಿಕೆಯ ಪ್ರಧಾನ ಸಂಚಾಲಕರಾದ ಸುನಿಲ್ ಕುಮಾರ್ ಬಜಾಲ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News