ದ.ಕ. ಜಿಲ್ಲೆಯಲ್ಲಿ ಕೋವಿಡ್‌ಗೆ ಓರ್ವ ಬಲಿ
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೋವಿಡ್‌ಗೆ ನಗರದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.
51ರ ಹರೆಯದ ನಗರದ ನಿವಾಸಿ ಬಿಪಿ , ಶುಗರ್ ಮತ್ತು ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದರು. ಡಿ.19ರಂದು ಆಸ್ಪತ್ರೆಗೆ ದಾಖಲಾಗಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೋವಿಡ್ ಬಾಧಿತ ಈ ರೋಗಿ ಮೃತಪಟ್ಟಿರುವುದಾಗಿ ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.
ಇಂದು 392 ಮಂದಿಯ ತಪಾಸಣೆ ನಡೆಸಲಾಗಿದ್ದು, ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಕೋವಿಡ್ ವೈರಸ್ ಸೋಂಕಿತ 8 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಕೋವಿಡ್ ಮಾದರಿ ಸಂಗ್ರಹಕ್ಕೆ ಸಂಬಂಧಿಸಿದಂತೆ ದ.ಕ. ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ದ.ಕ.ಜಿಲ್ಲೆಯ ಎಲ್ಲಾ ವೈದ್ಯಕೀಯ ವಿದ್ಯಾನಿಲಯಗಳ ಪ್ರತಿನಿಧಿಗಳು, ತಾಲೂಕು ಅಧಿಕಾರಿಗಳು, ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು ಮತ್ತು ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು ಭಾಗವಹಿಸಿದ್ದರು.