ದಕ್ಷಿಣ ಕನ್ನಡ ಸಹಕಾರಿ ನೌಕರರ ಸಂಘಕ್ಕೆ ಆರನೇ ಬಾರಿ ಎಸ್ಸಿಡಿಸಿಸಿ ಬ್ಯಾಂಕ್ 'ಸಾಧನಾ ಪ್ರಶಸ್ತಿ '
ಮಂಗಳೂರು: 92 ವರ್ಷಗಳ ಸೇವೆಯಲ್ಲಿರುವ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಂಘಕ್ಕೆ ಸತತ ಆರನೇ ಬಾರಿಗೆ ಎಸ್ ಸಿಡಿಸಿಸಿ ಬ್ಯಾಂಕ್ ' ಸಾಧನಾ ಪ್ರಶಸ್ತಿ ' ಲಭಿಸಿದೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಸಂಘಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘವು ಸಹಕಾರ ರಂಗದಲ್ಲಿ ತನ್ನ ಅಸ್ತಿತ್ವವನ್ನು ಉಳಿಸಿ ಕೊಂಡು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿದೆ.
ಸಂಘವು ನೌಕರ ಸದಸ್ಯರಿಗೆ ಉತ್ತಮ ಸೇವೆಯನ್ನು ನೀಡುತ್ತಿದ್ದು , ಕಳೆದ 27 ವರ್ಷಗಳಿಂದ ತನ್ನ ಸದಸ್ಯರ ಆರ್ಥಿಕ ಬೇಡಿಕೆಯನ್ನು ಪೂರೈಸಿ ಸದೃಢವಾಗಿ ಬೆಳೆದಿದೆ. ಮಂಗಳೂರು ನಗರದ ಕೊಡಿಯಾಲ್ ಬೈಲ್ ನಲ್ಲಿ ಮೂರು ಅಂತಸ್ತಿನ ಸ್ವಂತ ಕಟ್ಟಡವನ್ನು ಸಂಘ ಹೊಂದಿದೆ. ಸಂಘವು ಸತತ ಲಾಭ ಗಳಿಕೆಯಲ್ಲಿದ್ದು . ಸಹಕಾರಿ ನೌಕರ ಸದಸ್ಯರ ಆರ್ಥಿಕ ಶಕ್ತಿ ಎನಿಸಿದೆ. ಸಂಘದ ಕಾರ್ಯ ಸಾಧನೆಯನ್ನು ಗುರುತಿಸಿ ಎಸ್ ಸಿಡಿಸಿಸಿ ಬ್ಯಾಂಕ್ ನೀಡುವ ಪ್ರತಿಷ್ಠಿತ ಸಾಧನಾ ಪ್ರಶಸ್ತಿಯು 2017-18 , 2018-19 , 2019-20 , 2020-21, 2021-22ನೇ ಸಾಲಿನಲ್ಲಿ ಪ್ರಾಪ್ತಿಯಾಗಿತ್ತು. ಇದೀಗ 2022-23ನೇ ಸಾಲಿನಲ್ಲೂ ಈ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಸಹಕಾರಿ ನೌಕರರ ಸಂಘವು ಮುಡಿಗೇರಿಸಿಕೊಂಡಿದೆ.
ಶನಿವಾರ ನಡೆದ ಎಸ್ ಸಿಡಿಸಿಸಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಂಘಕ್ಕೆ ನೀಡಿದ ಎಸ್ ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿಯನ್ನು ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಂದ ಸಂಘದ ಅಧ್ಯಕ್ಷ ಎಸ್. ಜಗದೀಶ್ಚಂದ್ರ ಅಂಚನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿ ಕಾರಿ ಸತೀಶ್ ಪೂಜಾರಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಎಸ್ ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ , ನಿರ್ದೇಶಕರುಗಳಾದ ಬಿ. ನಿರಂಜನ , ಟಿ.ಜಿ.ರಾಜರಾಮ ಭಟ್, ಭಾಸ್ಕರ್ ಎಸ್ ಕೋಟ್ಯಾನ್, ವಾದಿರಾಜ ಶೆಟ್ಟಿ ಎಂ , ದೇವಿಪ್ರಸಾದ್ ಶೆಟ್ಟಿ ಬೆಳಪು , ಶಶಿಕುಮಾರ್ ರೈ ಬಾಲ್ಯೋಟ್ಟು, ಎಸ್. ಬಿ.ಜಯರಾಮ್ ರೈ , ರಾಜು ಪೂಜಾರಿ, ಮಹೇಶ್ ಹೆಗ್ಡೆ, ಅಶೋಕ್ ಕುಮಾರ್ ಶೆಟ್ಟಿ , ಮೋನಪ್ಪ ಶೆಟ್ಟಿ ಎಕ್ಕಾರು, ಹರಿಶ್ಚಂದ್ರ , ಕೆ. ಜೈರಾಜ್ ಬಿ.ರೈ , ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್. ಎನ್ , ಉಭಯ ಜಿಲ್ಲೆಗಳ ಸಹಕಾರಿ ಯೂನಿಯನ್ ಅಧ್ಯಕ್ಷರುಗಳಾದ ಜಯಕರ ಶೆಟ್ಟಿ ಇಂದ್ರಾಳಿ , ಪ್ರಸಾದ್ ಕೌಶಲ್ ಶೆಟ್ಟಿ ಬ್ಯಾಂಕಿನ ಮಹಾಪ್ರಬಂಧಕರಾದ ಅಶೋಕ್ ಕುಮಾರ್, ಸಹಕಾರಿ ನೌಕರರ ಸಹಕಾರ ಸಂಘದ ಉಪಾಧ್ಯಕ್ಷರಾದ ದಿವಾಕರ್ ಶೆಟ್ಟಿ, ನಿರ್ದೇಶಕರಾದ ಜಯಪ್ರಕಾಶ್ ರೈ , ವಿಶ್ವೇಶ್ವರ ಐತಾಳ್ ಉಪಸ್ಥಿತರಿದ್ದರು.