ಬೆಳ್ಳಾರೆ ಪೇಟೆಯಲ್ಲಿ ಮಹಿಳೆಯ ಮೃತದೇಹ ಪತ್ತೆ: ಕೊಲೆ ಶಂಕೆ

Update: 2024-06-10 07:18 GMT

ಸುಳ್ಯ, ಜೂ.10: ಬೆಳ್ಳಾರೆ ಪೇಟೆಯಲ್ಲಿ ಇಂದು ಬೆಳಗ್ಗೆ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.

ಮೃತ ಮಹಿಳೆಯನ್ನು ಪಾಟಾಜೆಯ ನಳಿನಿ ಎಂದು ಗುರುತಿಸಲಾಗಿದೆ. ಅವರ ಮೃತದೇಹ ಇಂದು ಬೆಳಗ್ಗೆ ಬೆಳ್ಳಾರೆ ಪೇಟೆಯ ಎಪಿಎಂಸಿ ಮಾರುಕಟ್ಟೆ ಬಳಿ ಪತ್ತೆಯಾಗಿದೆ. ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News