ದಲಿತ ಅಪ್ರಾಪ್ತ ವಿದ್ಯಾರ್ಥಿಗೆ ಲೈಂಗಿಕ ದೌರ್ಜನ್ಯ; ಆರೋಪಿ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಧನಕ್ಕೆ ಒತ್ತಾಯ
Update: 2025-03-26 23:44 IST
ಸಾಂದರ್ಭಿಕ ಚಿತ್ರ | credit: freepik.com
ಮಂಗಳೂರು, ಮಾ.೨೬: ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಗೆ ಸ್ಥಳೀಯ ಬಿಜೆಪಿ ಮುಖಂಡ ಮಹೇಶ್ ಭಟ್ ಎಂಬಾತ ಲೈಂಗಿಕ ದೌರ್ಜನ್ಯ ಎಸಗಿದ್ದು, ತಕ್ಷಣ ಆತನನ್ನು ಬಂಧಿಸಬೇಕು ಎಂದು ಡಿಎಚ್‌ಎಸ್ ಜಿಲ್ಲಾ ಮುಖಂಡರಾದ ಈಶ್ವರಿ ಶಂಕರ್ ಪದ್ಮುಂಜ ಹಾಗೂ ಕೃಷ್ಣ ತಣ್ಣೀರುಬಾವಿ ಒತ್ತಾಯಿಸಿದ್ದಾರೆ.
ಈ ಪ್ರಕರಣವನ್ನು ವಿಟ್ಲ ಪೊಲೀಸರು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷವಹಿಸಿದ್ದರು. ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯನ್ನು ಸಂಪರ್ಕಿಸಿದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದೀಗ ಆರೋಪಿ ಮಹೇಶ್ ಭಟ್ ಮೇಲೆ ಪೊಕ್ಸೊ ಪ್ರಕರಣದಡಿ ಕೇಸು ದಾಖಲಾಗಿದ್ದರೂ ತಲೆಮರೆಸಿಕೊಂಡಿದ್ದಾರೆ. ಆತನನ್ನು ಈವರೆಗೆ ಬಂಧಿಸದ ಪೊಲೀಸರ ಕ್ರಮ ಖಂಡನೀಯ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.