ದೇರಳಕಟ್ಟೆ: ತರಬೇತುದಾರ ರಫೀಕ್ ಮಾಸ್ಟರ್‌ಗೆ ಸನ್ಮಾನ
Update: 2025-01-23 14:15 IST

ದೇರಳಕಟ್ಟೆ: ಸರಕಾರಿ ಶಾಲೆಯ ಶಿಕ್ಷಕನಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದು, ಇದೀಗ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮತ್ತು ಸಂಘ ಸಂಸ್ಥೆಗಳಿಗೆ ಮಾರ್ಗದರ್ಶನ, ತರಬೇತಿ, ಪ್ರೇರಣಾ ತರಗತಿಗಳನ್ನು ನೀಡುತ್ತಿರುವ ತರಬೇತುದಾರ ರಫೀಕ್ ಮಾಸ್ಟರ್ ಅವರನ್ನು ದೇರಳಕಟ್ಟೆ ಹಯಾತುಲ್ ಇಸ್ಲಾಂ ಮದರಸ ಹಳೇ ವಿದ್ಯಾರ್ಥಿಗಳ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಇಬ್ರಾಹಿಂ ಹಾಜಿ ಕತ್ತರ್, ಬದ್ರಿಯಾ ಮಸೀದಿ ಅಧ್ಯಕ್ಷ ಅಬ್ದುಲ್ ಆರ್ ಅಹ್ಮದ್ ಶೇಟ್, ಕಾರ್ಯದರ್ಶಿ ಉಸ್ಮಾನ್ M.H.,ಬೆಳ್ಮ ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್ H.R, ಕಾರ್ಯದರ್ಶಿ ಡಿ.ಎ ಅಶ್ರಫ್,ಶಿಹಾಬ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.