ದೇಶದ ಅಭಿವೃದ್ಧಿಗೆ ಪರಿಣಾಮಕಾರಿ ಸಾರ್ವಜನಿಕ ಸಂಬಂಧದ ಅಗತ್ಯವಿದೆ: ಶ್ರೀಪಾದ್ ಯೆಸ್ಸೊನಾಯಕ್

Update: 2024-11-08 18:18 GMT

ಮಂಗಳೂರು: ದೇಶದ ಅಭಿವೃದ್ಧಿಗೆ ಪರಸ್ಪರ ಸಹಕಾರ,ಪರಿಣಾಮ ಕಾರಿ ಸಾರ್ವಜನಿಕ ಸಂಬಂಧದ ಅಗತ್ಯವಿದೆ ಎಂದು ವಿದ್ಯುತ್ ಮತ್ತು ಹೊಸ ಮತ್ತು ನವೀಕರಿಸ ಬಹುದಾದ ಇಂಧನ ಸಚಿವಾಲಯದ ರಾಜ್ಯ ಸಚಿವ ಶ್ರೀಪಾದ್ ಯೆಸ್ಸೊನಾಯಕ್ ತಿಳಿಸಿದ್ದಾರೆ.

ಅವರು ಶುಕ್ರವಾರ ನಗರದ ಮೋತಿಮಹಲ್ ಹೊಟೇಲ್ ಸಭಾಂಗಣದಲ್ಲಿ ಅಖಿಲ ಭಾರತ ಸಾರ್ವಜನಿಕ ಸಂಪರ್ಕ ಮಂಡಳಿ (ಪಿಆರ್‌ಸಿಐ) ಮಂಗಳೂರಲ್ಲಿ ಆಯೋಜಿಸಿದ ಎರಡು ದಿನಗಳ 18ನೇ ಗ್ಲೋಬಲ್ ಕಮ್ಯುನಿಕೇಶನ್ ಕಾನ್‌ಕ್ಲೇವ್ ನಲ್ಲಿ ಸಾಧಕರ ಸನ್ಮಾನ ಮತ್ತು ಪ್ರಶಸ್ತಿ ವಿತರಣಾ ಸಮಾ ರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಇಂದಿನ ಡಿಜಿಟಲ್ ಯುಗದಲ್ಲಿ ಜಾಗತಿಕ ಸಂಬಂಧ ಗಳನ್ನು ಉತ್ತಮ ಗೊಳಿಸಲು ಅಪನಂಬಿ ಕೆಗಳನ್ನು ದೂರಗೊಳಿಸಲು ಉತ್ತಮ ಸಾರ್ವಜನಿಕ ಸಂಪರ್ಕ ಅಗತ್ಯವಿದೆ. ಆದ್ದರಿಂದ ಸಾರ್ವಜನಿಕ ಸಂಪರ್ಕವನ್ನು ಪುನರ್ ಸ್ಥಾಪಿಸುವ ಜೊತೆಗೆ ಡಿಜಿಟಲ್‌ ಸಂಪರ್ಕ ವ್ಯವಸ್ಥೆ ಯನ್ನು ಇನ್ನಷ್ಟು ಗಟ್ಟಿಗೊಳಿಸಬೇಕಾಗಿದೆ. ಉತ್ತಮ ಸಂಪರ್ಕ, ಸಂವಹನದಿಂದ ಸಮಾಜದಲ್ಲಿ ಉತ್ತಮ ಬಾಂಧವ್ಯವನ್ನು ಹೊಂದಲು ಸಾಧ್ಯ ಎಂದು ಸಚಿವರು ಸಮ್ಮೇಳನಕ್ಕೆ ಶುಭ ಹಾರೈಸಿದರು.

ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಮತ್ತು ಪಿಆರ್ ಸಿಐ ಪ್ರಶಸ್ತಿ ವಿತರಿಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News