ಅ.18ರಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಮಂಗಳೂರು,ಅ.17: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅ.18ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಅ.18ರ ಬೆಳಗ್ಗೆ 9:15ಕ್ಕೆ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಪದಾಧಿಕಾರಿಗಳ ನಿಯೋಗದ ಸಭೆಯಲ್ಲಿ ಪಾಲ್ಗೊಳ್ಳುವರು. 10:30ಕ್ಕೆ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಾವೇಶ ಮತ್ತು ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಪೂ.11:30ಕ್ಕೆ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು.
ಸಂಜೆ 5:30ಕ್ಕೆ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ನವರಾತ್ರಿ ಉತ್ಸವದಲ್ಲಿ ಪಾಲ್ಗೊಳ್ಳುವರು. ರಾತ್ರಿ 7ಕ್ಕೆ ನಗರದ ಹೊಟೇಲ್ ದೀಪಾ ಕಂಫರ್ಟ್ಸ್‌ನಲ್ಲಿ ಮಂಗಳೂರು ಯುರೋಲಜಿ ಫಾರಂನ ಮಾಸಿಕ ಸಭೆಯಲ್ಲಿ ಭಾಗವಹಿಸುವರು. ರಾತ್ರಿ 9:50ಕ್ಕೆ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.