ದ.ಕ. ಜಿಲ್ಲಾ ಸರಕಾರಿ ನೌಕರರ ಸಂಘದ ಚುನಾವಣೆ ಅಸಿಂಧು

Update: 2023-11-18 12:20 GMT

ಮಂಗಳೂರು: ರಾಜ್ಯ ಸರಕಾರಿ ನೌಕರರ ಸಂಘದ ದ.ಕ. ಜಿಲ್ಲಾ ಶಾಖೆಯ ಪದಾಧಿಕಾರಿಗಳ ಆಯ್ಕೆಗಾಗಿ ನಡೆದ ಚುನಾವಣಾ ಪ್ರಕ್ರಿಯೆಯು ಅಸಿಂಧು ಎಂದು ಮಂಗಳೂರಿನ ಪ್ರಧಾನ ಸಿವಿಲ್ ನ್ಯಾಯಾಲಯ ನೀಡಿದ ತೀರ್ಪನ್ನು ಮಂಗಳೂರಿನ 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯ ಎತ್ತಿ ಹಿಡಿದಿದೆ.

ದ.ಕ. ಜಿಲ್ಲಾ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳ ಸ್ಥಾನಕ್ಕೆ ನಡೆದ ಚುನಾವಣೆಯ ಪ್ರಕ್ರಿಯೆಯು ಮುಕ್ತ, ಪಾರದರ್ಶಕ ಹಾಗೂ ನ್ಯಾಯ ಸಮ್ಮತವಾಗಿ ನಡೆದಿಲ್ಲವೆಂದು ಬಂದರು ಇಲಾಖೆಯ ಅಧಿಕಾರಿ ಎಸ್.ನಿರಂಜನ ಮೂರ್ತಿ ಜಿಲ್ಲಾ ಸಂಘ ಮತ್ತು ಚುನಾವಣಾ ಅಧಿಕಾರಿಗಳ ವಿರುದ್ಧ ಮಂಗಳೂರಿನ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.

ಇದರ ವಿಚಾರಣೆ ನಡೆಸಿದ್ದ ಪ್ರಧಾನ ನ್ಯಾಯಾಲಯವು ನಿಯಮಾನುಸಾರ ಚುನಾವಣಾ ಪ್ರಕ್ರಿಯೆ ನಡೆದಿಲ್ಲ. ಹಾಗಾಗಿ ಮತ್ತೆ ಚುನಾವಣೆ ನಡೆಸುವಂತೆ ಎಂದು 2022ರ ಆಗಸ್ಟ್ 24ರಂದು ಚುನಾವಣಾ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು. ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಮಂಗಳೂರಿನ 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲಾಗಿತ್ತು.

ನ.17ರಂದು ಹಿರಿಯ ಸಿವಿಲ್ ನ್ಯಾಯಾಲಯದ ತೀರ್ಪನ್ನು 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯ ಎತ್ತಿ ಹಿಡಿದಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News