ದ.ಕ. ಜಿಲ್ಲೆಯ 88 ಕೇಂದ್ರಗಳಲ್ಲಿ ಎಸೆಸೆಲ್ಸಿ ಪರೀಕ್ಷೆ ಆರಂಭ

Update: 2024-03-25 05:40 GMT

ಮಂಗಳೂರು, ಮಾ.25: ದ.ಕ. ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆ ಇಂದಿನಿಂದ (ಮಾ.25) ಆರಂಭಗೊಂಡಿದೆ. ಜಿಲ್ಲೆಯಲ್ಲಿ ಒಟ್ಟು 88 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಇಂದು ಪ್ರಥಮ ಭಾಷೆ ಕನ್ನಡ/ಇಂಗ್ಲಿಷ್/ಸಂಸ್ಕೃತ ವಿಷಯದ ಪರೀಕ್ಷೆ ಆರಂಭಗೊಂಡಿದೆ.

30,348 ವಿದ್ಯಾರ್ಥಿಗಳು ಹೆಸರು ನೋಂದಣಿ

ಪ್ರಸಕ್ತ ಸಾಲಿನ ಎಸೆಸ್ಸೆಲ್ಸಿ ಪರೀಕ್ಷೆಗೆ ದ.ಕ. ಜಿಲ್ಲೆಯಲ್ಲಿ ಒಟ್ಟು 30,348 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದಾರೆ. ಈ ಪೈಕಿ 27,663 ರೆಗ್ಯುಲರ್, 1,053 ಖಾಸಗಿ, 1,632 ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ.

*ಜಿಲ್ಲೆಯ ಬಂಟ್ವಾಳದಲ್ಲಿ 17, ಬೆಳ್ತಂಗಡಿಯಲ್ಲಿ 13, ಮಂಗಳೂರು ಉತ್ತರ ವ್ಯಾಪ್ತಿಯಲ್ಲಿ 18, ಮಂಗಳೂರು ದಕ್ಷಿಣ ವ್ಯಾಪ್ತಿಯಲ್ಲಿ 16, ಮೂಡುಬಿದಿರೆಯಲ್ಲಿ 5, ಪುತ್ತೂರು 13 ಹಾಗೂ ಸುಳ್ಯ ವಲಯದಲ್ಲಿ 6 ಸಹಿತ ಜಿಲ್ಲೆಯಲ್ಲಿ 88 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ 88 ಮುಖ್ಯ ಅಧೀಕ್ಷಕರು, 42 ಉಪಮುಖ್ಯ ಅಧೀಕ್ಷಕರು, 88 ಕಸ್ಟೋಡಿಯನ್, 88 ಸ್ಥಾನಿಕ ಜಾಗೃತ ದಳದ ಕಾರ್ಯಕ್ಕೆ ಅಧಿಕಾರಿಗಳು, 88 ಮೊಬೈಲ್ ಫೋನು ಸ್ವಾಧೀನಾಧಿಕಾರಿಗಳು, 30 ಮಾರ್ಗಾಧಿಕಾರಿಗಳು, 1,588 ಕೊಠಡಿ ಮೇಲ್ವಿಚಾರಕರು ಕಾರ್ಯನಿರ್ವಹಿಸುತ್ತಿದ್ದಾರೆ.

ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ. ಅಭ್ಯರ್ಥಿಗಳ ಅನುಕೂಲಕ್ಕಾಗಿ ಸೂಕ್ತ ಸೂಚನಾ ಫಲಕಗಳ ವ್ಯವಸ್ಥೆ ಮಾಡಲಾಗಿದೆ. ಅಭ್ಯರ್ಥಿಗಳಿಗೆ ಅಗತ್ಯ ಅಸನದ ವ್ಯವಸ್ಥೆ ಮಾಡಲಾಗಿದೆ. ಕುಡಿಯುವ ನೀರು, ಶೌಚಾಲಯ ಹಾಗೂ ಇತರ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಮೊಬೈಲ್ ಸ್ವಾಧೀನಾಧಿಕಾರಿಯನ್ನು ನೇಮಕ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News