ಡಾ. ಕೆ. ಶಿವರಾಮ ಕಾರಂತರ ಬಗ್ಗೆ ಪ್ರಬಂಧ ಸ್ಪರ್ಧೆ

Update: 2023-09-16 13:23 GMT

ಮಂಗಳೂರು, ಸೆ.16:ಕಲ್ಕೂರ ಪ್ರತಿಷ್ಠಾನದ ವತಿಯಿಂದ ಅ.10ರಂದು ಡಾ. ಕೋಟ ಶಿವರಾಮ ಕಾರಂತರ ಜನ್ಮ ದಿನೋತ್ಸವದ ಪ್ರಯುಕ್ತ ಕಾರಂತರ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಪ್ರೌಢಶಾಲೆ, ಕಾಲೇಜು ಹಾಗೂ ಮುಕ್ತ ಎಂಬ 3 ಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಪ್ರೌಢಶಾಲೆ ವಿಭಾಗ : ಕಾರಂತರ ವಿಜ್ಞಾನ ಸಾಹಿತ್ಯ, ಕಾಲೇಜು ವಿಭಾಗ: ಕಾರಂತರು ಮತ್ತು ಯಕ್ಷಗಾನ, ಮುಕ್ತ ವಿಭಾಗ : ಮೂಕಜ್ಜಿಯ ಕಸುಗಳು - ವೈಚಾರಿಕತೆ, ವಿಶ್ಲೇಷಣೆ ಎಂಬ ವಿಷಯದಲ್ಲಿ ಮೂರು ಪುಟಕ್ಕೆ ಮೀರದಂತೆ ಪ್ರಬಂಧವನ್ನು ಅ.6ರೊಳಗೆ ಸ್ವವಿಳಾಸ ಮತ್ತು ಸಂಪರ್ಕ ದೂರವಾಣಿ ಸಂಖ್ಯೆಯೊಂದಿಗೆ ಕಲ್ಕೂರ ಪ್ರತಿಷ್ಠಾನ, ಶ್ರೀಕೃಷ್ಣ ಸಂಕೀರ್ಣ, ಮಹಾತ್ಮ ಗಾಂಧಿ ರಸ್ತೆ, ಕೊಡಿಯಾಲ್‌ಬೈಲ್, ಮಂಗಳೂರು ಈ ವಿಳಾಸಕ್ಕೆ ಕಳುಹಿಸುವಂತೆ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ ತಿಳಿಸಿದ್ದಾರೆ.

 



 


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News