ಸಿದ್ಧಕಟ್ಟೆ ಸರ್ಕಾರಿ ಕಾಲೇಜಿನಲ್ಲಿ ಡ್ರಗ್ಸ್ ಜಾಗೃತಿ, ಪೋಕ್ಸೋ ಕಾಯ್ದೆ ಕುರಿತ ಮಾಹಿತಿ ಕಾರ್ಯಾಗಾರ

Update: 2023-08-18 06:55 GMT

ಬಂಟ್ವಾಳ: ಆ್ಯಂಟಿ ಡ್ರಗ್ ಸೆಲ್, ರಾಷ್ಟ್ರೀಯ ಸೇವಾ ಯೋಜನೆ, ರೋವರ್ ರೇಂಜರ್, ಯೂತ್ ರೆಡ್ ಕ್ರಾಸ್ ಮತ್ತು ಇಕೋ ಕ್ಲಬ್ ಗಳ ಆಶ್ರಯದಲ್ಲಿ ಮಾದಕ ವ್ಯಸನ ಮುಕ್ತ ಸಮಾಜ ಹಾಗೂ ಪೋಕ್ಸೋ ಕಾಯ್ದೆ, ರಸ್ತೆ ಸುರಕ್ಷತೆ ಕುರಿತ ಕಾರ್ಯಕ್ರಮವು ಸಿದ್ಧಕಟ್ಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ನಡೆಯಿತು.

ಕಾಲೇಜಿನ ಪ್ರಾಂಶುಪಾಲ ಉದಯಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಹಿರಿಯ ಉಪನ್ಯಾಸಕರಾದ ಶ್ರೀನಿವಾಸ ನಾಯ್ಕ ಪ್ರಾಸ್ತಾವಿಕ ಮತುಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಭಾರತಿ ಅವರು ಪೋಕ್ಸೋ ಕಾಯ್ದೆ ಹಾಗೂ ಪೊಲೀಸ್ ಇಲಾಖೆಯ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಿದರು.

ವಿದ್ಯಾರ್ಥಿಗಳು ಪೋಕ್ಸೋ ಕಾಯ್ದೆಯ ಬಗ್ಗೆ ಅರಿವು ಮೂಡಿಸಿಕೊಂಡು ತಮ್ಮ ಶಿಕ್ಷಣದ ಕಡೆ ಗಮನ ಹರಿಸಬೇಕು. ಮಾದಕ ವಸ್ತುಗಳ ಮಾರಾಟ ಹಾಗೂ ಸೇವನೆ ಎರಡೂ ಅಪರಾಧ. ವಿದ್ಯಾರ್ಥಿಗಳು ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗಬಾರದು. ಮಾದಕ ವಸ್ತುಗಳ ಮಾರಾಟ ಹಾಗೂ ಸೇವನೆ ಕಂಡುಬಂದಲ್ಲಿ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.


ಅದೇ ರೀತಿ ಕಾರ್ಯಕ್ರಮದಲ್ಲಿ ಹಾಜರಿದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಹನಮಂತ ಅವರು ರಸ್ತೆ ಸುರಕ್ಷತೆ ಹಾಗೂ ವಿದ್ಯಾರ್ಥಿಗಳು ಸುರಕ್ಷಿತವಾಗಿ ಮೊಬೈಲ್ ಬಳಕೆಯ ಕುರಿತು ಉಪಯುಕ್ತ ಮಾಹಿತಿಯನ್ನು ನೀಡಿದರು.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಇತರ ಸಿಬ್ಬಂದಿಗಳಾದ ಅಜಯ್ ಹಾಗೂ ಸಹದೇವ್ ಉಪಸ್ಥಿತರಿದ್ದರು.

ಎನ್ಎಸ್ಎಸ್ ಸಂಯೋಜನಾಧಿಕಾರಿ ಶೀನಪ್ಪ ಎನ್ ವಂದಿಸಿದರು. ಕನ್ನಡ ಉಪನ್ಯಾಸಕರಾದ ಶ್ರೀ ಸಂಜಯ್ ಬಿ ಎಸ್ ಕಾರ್ಯಕ್ರಮ ನಿರೂಪಿಸಿದರು.


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News