ಮಾದಕ ವಸ್ತು ಸಾಗಾಟ: ಆರೋಪಿ ಸೆರೆ

Update: 2023-09-07 16:07 GMT

ಮಂಗಳೂರು, ಸೆ.7: ನಗರದ ಬೋಳೂರು ಸಮೀಪ ಕಾರಿನಲ್ಲಿ ಅಕ್ರಮವಾಗಿ ಎಂಡಿಎಂಎ ಸಾಗಾಟ ಮಾಡುತ್ತಿದ್ದಾಗ ಆರೋಪಿ ಕುತ್ತಾರ್ ಸಮೀಪದ ಫರಾಜ್ (26)ಎಂಬಾತನನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.

ಸೆ.7ರಂದು ಬೆಳಗ್ಗೆ 8ಕ್ಕೆ ಕೊಣಾಜೆ ಕಡೆಯಿಂದ ನಂತೂರು, ಕೊಟ್ಟಾರ ಚೌಕಿ ಮಾರ್ಗವಾಗಿ ಕಾರಿನಲ್ಲಿ ಮಾದಕ ವಸ್ತುವನ್ನು ಅಶೋಕ ನಗರದ ಕಾಲೇಜು ಪರಿಸರದಲ್ಲಿ ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ತರುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಬೋಳೂರು ಗ್ರಾಮದ ಈರಿ ಎಂಬಲ್ಲಿ ಕಾರನ್ನು ಅಡ್ಡಗಟ್ಟಿ ಆರೋಪಿಯನ್ನು ಬಂಧಿಸಿ ಮೊಬೈಲ್ ಫೋನ್, ಎಂಡಿಎಂಎ, ಡಿಜಿಟಲ್ ತೂಕ ಮಾಪನ ವಶಪಡಿಸಿಕೊಂಡಿದ್ದಾರೆ.

ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News