ಮಂಗಳೂರನ್ನು ಸ್ವಚ್ಛ ನಗರವನ್ನಾಗಿಸುವ ಪ್ರಯತ್ನ: ಮೇಯರ್ ಸುಧೀರ್ ಶೆಟ್ಟಿ

Update: 2023-09-16 17:48 GMT

ಮಂಗಳೂರು: ಮಂಗಳೂರು ನಗರವನ್ನು ದೇಶದ ಅತ್ಯಂತ ಸ್ವಚ್ಛ ನಗರಗಳಲ್ಲಿ ಒಂದನ್ನಾಗಿಸುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ. ಇದಕ್ಕೆ ನಮಗೆ ರಾಮಕೃಷ್ಣ ಮಠದ ಮಾರ್ಗದರ್ಶನ ಅಗತ್ಯ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಹೇಳಿದ್ದಾರೆ.

ಸ್ವಚ್ಛ ಮಂಗಳೂರು ಅಭಿಯಾನ ಪುನರಾರಂಭಿಸುವ ಬಗ್ಗೆ ಪೂರ್ವಭಾವಿ ಯೋಜನೆಗಳನ್ನು ಚರ್ಚಿಸಲು ಮಂಗಳಾದೇವಿ ಯಲ್ಲಿರುವ ರಾಮಕೃಷ್ಣ ಮಠದಲ್ಲಿ ನಡೆದ ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್‌ಗಳ ಸಭೆಯಲ್ಲಿ ಮಾತನಾಡಿದರು.

ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಮಾತನಾಡಿ ಸ್ವಚ್ಛತೆ ನಮ್ಮ ಸಂಸ್ಕೃತಿಯ ಒಂದು ಭಾಗವಾಗಬೇಕು. ಮಂಗಳೂರು ನನ್ನದು ಎಂದು ಪ್ರತಿಯೊಬ್ಬ ನಗರವಾಸಿಗಳಲ್ಲಿ ಭಾವನೆ ಮೂಡಬೇಕು. ಬಾಲ್ಯದಲ್ಲಿಯೇ ಮಕ್ಕಳಿಗೆ ಸ್ವಚ್ಛತೆಯ ಅರಿವು ನೀಡಬೇಕು ಎಂದರು.

ಸ್ವಚ್ಛ ಮಂಗಳೂರು ಅಭಿಯಾನದ ರೂಪುರೇಷೆೆ ಹಾಗೂ ಕಾರ್ಯಯೋಜನೆಗಳ ಬಗ್ಗೆ ಇಲ್ಲಿ ಚರ್ಚಿಸಲಾಯಿತು.

ಈ ಸಭೆಯಲ್ಲಿ ಮಂಗಳೂರು ನಗರದ ಮಾಜಿ ಮಹಾಪೌರರಾದ ಪ್ರೇಮಾನಂದ ಶೆಟ್ಟಿ, ಸಾಮಾಜಿಕ ಕಾರ್ಯಕರ್ತರಾದ ಸೀತಾರಾಮ್, ಸ್ವಚ್ಛ ಮಂಗಳೂರು ಮುಖ್ಯ ಸಂಯೋಜಕರಾದ ಉಮಾನಾಥ್ ಕೋಟೆಕಾರ್, ವಿವಿಧ ವಾರ್ಡಿನ ಕಾರ್ಪೊರೇಟರ್‌ಗಳು ಹಾಗೂ ಸ್ವಚ್ಛ ಮಂಗಳೂರು ಅಭಿಯಾನದ ಕಾರ್ಯಕರ್ತರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News