ಪರಿಸರ ಸಂರಕ್ಷಣೆ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕ: ಕೆ.ವಿ ಪ್ರಭಾಕರ್

Update: 2024-07-13 09:51 GMT

ಮಂಗಳೂರು,ಜು.13;ಮಾಧ್ಯಮ ಪ್ರತಿನಿಧಿಗಳು ಹಮ್ಮಿಕೊಂಡಿರುವ ಹಸಿರೇ ಉಸಿರು ಸೇರಿದಂತೆ ಪರಿಸರ ಸಂರಕ್ಷಣೆ ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕವಾದ ಮಹತ್ವದ ಕಾರ್ಯಕ್ರಮ ವಾಗಿದೆ ಎಂದು ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆ ಗಾರರಾದ ಕೆ.ವಿ. ಪ್ರಭಾಕರ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಅರಣ್ಯ ಇಲಾಖೆ ಸಹಾಭಾಗಿತ್ವದಲ್ಲಿ ನಗರದ ಕದ್ರಿ ಪಾರ್ಕ್ ನಲ್ಲಿ ಶನಿವಾರ ಹಮ್ಮಿಕೊಂಡ 'ಹಸಿರೇ ಉಸಿರು' ವನಮ ಹೋತ್ಸವ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಮಾಧ್ಯಮ ಪ್ರತಿನಿಧಿಗಳು ತಮ್ಮ ವೃತ್ತಿಯ ಜೊತೆ ಗ್ರಾಮ ವಾಸ್ತವ್ಯ, ವನಮಹೋತ್ಸವ, ಸರಕಾರಿ ಶಾಲೆ,ಅಂಗನವಾಡಿಗಳಿಗೆ ನೆರವು ಸೇರಿದಂತೆ ಸಾಮಾಜಿಕ ಹೊಣೆಗಾರಿ ಕೆಯನ್ನುಅರಿತು ಕಾರ್ಯ ನಿರ್ವಹಿಸು ತ್ತಿರುವುದು ಮಾದರಿ ಯಾಗಿದೆ ಎಂದು ಪ್ರಭಾಕರ್ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡುತ್ತಾ, ಪತ್ರಕರ್ತರು ಸಾಮಾಜಿಕ ಬದ್ಧತೆಯನ್ನು ಮರೆಯ ಬಾರದು.ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘ ಸಾಮಾಜಿಕ ಬದ್ಧತೆ ಯೊಂದಿಗೆ ಹಲವಾರು ಕಾರ್ಯಕ್ರ ಮತಗ ಳನ್ನು,ರಾಜ್ಯ ಸಂಘದ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಡೆಸಿಕೊಂಡು ಬಂದಿರುತ್ತಾರೆ ಎಂದು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಗುಲ್ಬರ್ಗ ಆಕಾಶವಾಣಿಯ ನಿವೃತ್ತ ನಿಲಯ ನಿರ್ದೇಶಕ ಸದಾನಂದ ಪೆರ್ಲ,ದ.ಕ ಜಿಲ್ಲಾ ವಾರ್ತಾ ಇಲಾಖೆಯ ಉಪ ನಿರ್ದೇಶಕ ಖಾದರ್ ಶಾ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ, ದ.ಕ. ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಕೋಶಾಧಿಕಾರಿ ಪುಷ್ಪರಾಜ್. ಬಿ.ಎನ್, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಹಿರಿಯ ಪತ್ರಕರ್ತ ರಾದ ರಮೇಶ್ ಪೆರ್ಲ ಮೊದಲಾದವರು ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News