ದ.ಕ. ಜಿಲ್ಲೆಯ ಮತದಾರರ ಅಂತಿಮ ಪಟ್ಟಿ ಪ್ರಕಟ: ಡಿಸಿ ಮುಲ್ಲೈ ಮುಗಿಲನ್

Update: 2024-01-23 13:21 GMT

ಮಂಗಳೂರು: ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅರ್ಹತಾ ದಿನಾಂಕ ಜ.1, 2024ರಂತೆ ದ.ಕ. ಜಿಲ್ಲೆಯ ಎಲ್ಲ 8 ವಿಧಾನಸಭಾ ಕ್ಷೇತ್ರಗಳಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಮತದಾರರ ನೋಂದಣಾಧಿಕಾರಿಗಳ ಕಚೇರಿ ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿ ಹಾಗೂ ಎಲ್ಲಾ ಮತಗಟ್ಟೆಗಳಲ್ಲಿ ಸಾರ್ವಜನಿಕ ತಿಳುವಳಿಕೆಗಾಗಿ ಜ.22ರಂದು ಪ್ರಕಾರ ಪಡಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

ವಿಶೇಷ ಸಂಕ್ಷಿಪ್ತ ಪರಿಷ್ಕರಣೆ: 2024ರಲ್ಲಿ ಮತದಾರರ ಒಟ್ಟು ಸೇರ್ಪಡೆ 27,440, ಮತದಾರರ ಪಟ್ಟಿಯಿಂದ ತೆಗೆದು ಹಾಕಿರುವವರು ಒಟ್ಟು-24,870, ತಿದ್ದುಪಡಿ ಮಾಡಿರುವ ಒಟ್ಟು ಮತದಾರರು-15,961.

ಜ.22ರಂದು ಪ್ರಕಟವಾದ ಅಂತಿಮ ಮತದಾರರ ಪಟ್ಟಿ- ಗಂಡು-8,73,277, ಹೆಣ್ಣು-9,15,058, ತೃತೀಯ ಲಿಂಗ-70 ಒಟ್ಟು 17,88,405.

ಮತದಾರರ ಪಟ್ಟಿಯಲ್ಲಿರುವ ಯುವ (18ರಿಂದ 19 ವರ್ಷ) ಮತದಾರರ ವಿವರ: ಗಂಡು-17,180 ಹೆಣ್ಣು-16,362, ತೃತೀಯ ಲಿಂಗ-3 ಒಟ್ಟು 33,545. ಅಂಗವಿಕಲ ಮತದಾರರ ವಿವರ: ಗಂಡು-7,902, ಹೆಣ್ಣು-5,851, ತೃತೀಯ ಲಿಂಗ-2 ಒಟ್ಟು 13,755. ಅನಿವಾಸಿ ಭಾರತೀಯ ಮತದಾರರ ವಿವರ: ಗಂಡು-182, ಹೆಣ್ಣು-51, ಒಟ್ಟು 233.

ಮತದಾರರ ಪಟ್ಟಿ ಸೇರ್ಪಡೆಗೆ ಅಗತ್ಯವಿರುವ ದಾಖಲೆಗಳು: ವಯಸ್ಸಿನ ಬಗ್ಗೆ ದಾಖಲೆಗಳು: ಶಾಲಾ ಪ್ರಮಾಣ ಪತ್ರ, ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಾಸ್‌ಪೋರ್ಟ್, ಎಸ್‌ಎಸ್‌ಎಲ್‌ಸಿ ,ಪಿಯುಸಿ ಅಂಕಪಟ್ಟಿ, ಪಾನ್‌ಕಾರ್ಡ್ ಹಾಗೂ ವೈದ್ಯಕೀಯ ಪ್ರಮಾಣ ಪತ್ರ.

ವಾಸ ಸ್ಥಳದ ಬಗ್ಗೆ ದಾಖಲೆಗಳು: ಪಡಿತರ ಚೀಟಿ, ಗ್ಯಾಸ್ ಸಿಲಿಂಡರ್ ಸ್ವೀಕೃತಿ ರಶೀದಿ, ವಿದ್ಯುತ್ ಬಿಲ್ ಪಾವತಿ, ಬ್ಯಾಂಕ್ ಪಾಸ್‌ಬುಕ್ ಪ್ರತಿ, ಪಾಸ್‌ಪೋರ್ಟ್, ವಾಹನ ಚಾಲನ ಪರವಾನಿಗೆ ಪ್ರತಿ, ಬಾಡಿಗೆ ಕರಾರು ಪತ್ರ ಹಾಗೂ ಇನ್ನಿತರ ದಾಖಲೆಗಳು. ಒಂದು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ.

ಮತದಾರರು ನಮೂನೆ 6ರಲ್ಲಿ 18 ವರ್ಷ ಪೂರೈಸಿದ ಹೊಸ ಮತದಾರರು ಮತದಾರರ ಪಟ್ಟಿಗೆ ಸೇರ್ಪಡೆಗೆ, ನಮೂನೆ 6ಎ ನಲ್ಲಿ ಆನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರ್ಪಡೆಗೆ, ನಮೂನೆ 7 ರಲ್ಲಿ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲು, ನಮೂನೆ 8ರಲ್ಲ್ ಹೆಸರು, ತಂದೆಯ ಹೆಸರು, ಮನೆ ವಿಳಾಸ, ವಯಸ್ಸಿಗೆ ಹಾಗೂ ಭಾವಚಿತ್ರಕ್ಕೆ ಸಂಬಂಧಿಸಿದಂತೆ ದೋಷಗಳನ್ನು ಸರಿಪಡಿಸಬಹುದು. ನಮೂನೆ 6ಬಿ ಯಲ್ಲಿ ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಅಥವಾ ನಮೂದಿಸಿರುವ ಇತರ ಯಾವುದಾದರೂ 11 ದಾಖಲೆಗಳನ್ನು ಜೋಡಣೆ ಮಾಡಬಹುದು.

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ನಾಲ್ಕು ಅರ್ಹತಾ ದಿನಗಳು ಜ.1, ಎ.1, ಜು.1 ಹಾಗೂ ಅ.1, ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ಮತದಾರರ ನೋಂದಾಣಾಧಿಕಾರಿ ಹಾಗೂ ಸಹಾಯಕ ಮತದಾರರ ನೋಂದಾಣಾಧಿಕಾರಿ ಕಚೇರಿ, ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿ ಅಥವಾ ವೆಬೆಸೈಟ್ ವಿಳಾಸ: ceokarnataka.kar.nic.in, ttps://voters.eci.gov.in, Voters Helpline Appಮೂಲಕ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವ ಬಗ್ಗೆ ಮತ್ತು ತಿದ್ದುಪಡಿ ಬಗ್ಗೆ ಪರಿಶೀಲಿಸಬಹುದು ಎಂದು ಜಿಲ್ಲಾಧಿಕಾರಿ ಪ್ರಕಟನೆ ಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News