ಜಾನುವಾರುಗಳಿಗೆ ಕಾಲುಬಾಯಿ ಜ್ವರ ಹಿನ್ನಲೆ: ಸುಳ್ಯ ತಾಲೂಕಿನ ಗಡಿ ಭಾಗದಲ್ಲಿ ಕಟ್ಟೆಚ್ಚರ

Update: 2023-08-10 16:57 GMT

ಸುಳ್ಯ: ಕೇರಳ ರಾಜ್ಯದಲ್ಲಿ ಜಾನುವಾರುಗಳಲ್ಲಿ ಕಾಲುಬಾಯಿ ಜ್ವರ ಕಂಡು ಬಂದ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನ ಗಡಿ ಭಾಗದ ಪ್ರದೇಶದಲ್ಲಿ ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಕಾಲುಬಾಯಿ ರೋಗ ನಿರೋಧಕ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಸುಳ್ಯ ತಾಲೂಕಿನ ಎಲ್ಲಾ ಲಸಿಕೆ ತರಬೇತಿ ಹೊಂದಿರುವ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಆಲೆಟ್ಟಿ ಮತ್ತು ಮಂಡೆಕೋಲು ಗ್ರಾಮಗಳ ಗಡಿ ಭಾಗದ ಲಸಿಕಾ ಕಾರ್ಯಕ್ರಮಕ್ಕೆ ನಿಯೋಜಿಸಲಾಗಿದೆ. ಮುಂದಿನ ಒಂದು ವಾರಗಳ ಕಾಲ ಈ ಕಾರ್ಯ ಕ್ರಮ ನಡೆಯಲಿದ್ದು ಕೇರಳ ರಾಜ್ಯದಿಂದ ರೋಗವು ಸುಳ್ಯ ತಾಲೂಕಿಗೆ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಲಸಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸುಳ್ಯ ಪಶುಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ.ನಿತೀನ್ ಪ್ರಭು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News