ರಮಾನಾಥ ರೈ ಅವರ ಹುಟ್ಟುಬ್ಬದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣೆ , ರಕ್ತದಾನ ಶಿಬಿರ ಹಾಗೂ ಸಾಧಕರಿಗೆ ಸನ್ಮಾನ
ಬಂಟ್ವಾಳ : ಅಕ್ಷಯ ಚಾರಿಟೇಬಲ್ ಟ್ರಸ್ಟ್ ಹಾಗೂ ಗೆಳೆಯರ ಬಳಗ ನಾರ್ಶ-ಬಾರೆಬೆಟ್ಟು ಇದರ ಜಂಟಿ ಆಶ್ರಯದಲ್ಲಿ ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರ ನಾಟೆಕಲ್, ಜಿಲ್ಲಾ ಅಂಧತ್ವ ನಿಯಂತ್ರಣ ಸೊಸೈಟಿ ಮಂಗಳೂರು ಇದರ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಅಕ್ಷಯ ಬ್ಲಡ್ ಡೋನರ್ಸ್ ಇದರ 24 ನೇ ರಕ್ತದಾನ ಶಿಬಿರವು ತಾಳಿತ್ತನೂಜಿ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆಯಿತು .
ಕಾರ್ಯಕ್ರಮವನ್ನು ಬಿ ರಮಾನಾಥ ರೈ ಉದ್ಘಾಟಿಸಿದರು, ಝಕರಿಯಾ ನಾರ್ಶ ಅಧ್ಯಕ್ಷತೆ ವಹಿಸಿದ್ದರು.
ಕೆಪಿಸಿಸಿ ಕಾರ್ಯದರ್ಶಿ ಅಶ್ವಿನ್ ಕುಮಾರ್ ರೈ, ಹೈದರ್ ಪರ್ತಿಪ್ಪಾಡಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ , ಅರಂತೋಡು ತೆಕ್ಕಿಲ್ ಪ್ರತಿಷ್ಠಾನದ ಅದ್ಯಕ್ಷ ಟಿ.ಎಂ.ಶಹೀದ್, ದ.ಕ. ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್ ಬಡಕಬೈಲು, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅರ್ಷದ್ ಸರವು, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸಿದ್ದೀಕ್ ಸರವು, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಕೆ.ಎಂ.ಲತೀಫ್ ಪರ್ತಿಪ್ಪಾಡಿ, ಅಡ್ವಕೇಟ್ ಮೂಸ ಕುಂಞ, ಮುಚ್ಚೂರು ಲಯನ್ಸ್ ಕ್ಲಬ್ ಅಧ್ಯಕ್ಷ ರೋಹನ್, ಎಸ್.ವೈ.ಎಸ್ ಬಂಟ್ವಾಳ ಝೋನ್ ಅಧ್ಯಕ್ಷ ಮಹ್ಮೂದ್ ಸಅದಿ, ಎಸ್.ವೈ.ಎಸ್ ಸುಳ್ಯ ಸ್ವಾಂತನಾ ಕಾರ್ಯದರ್ಶಿ ಸಿದ್ದೀಕ್ ಗೂನಡ್ಕ, ಎಸ್.ಎಮ್.ಎ ಬಂಟ್ವಾಳ ಝೋನ್ ಅಧ್ಯಕ್ಷ ಸಿ.ಹೆಚ್. ಅಬೂಬಕ್ಕರ್, ಪರ್ತಿಪ್ಪಾಡಿ ಜುಮಾ ಮಸೀದಿ ಅಧ್ಯಕ್ಷ ಹಕೀಂ ಪರ್ತಿಪ್ಪಾಡಿ, ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಸದಸ್ಯ ಹರ್ಷದ್ ಕುಕ್ಕಿಲ, ಮಾಜಿ ಸದಸ್ಯ ಯೂಸುಫ್ ತಾಳಿತ್ತನೂಜಿ , ಕೊಲ್ನಾಡು ಗ್ರಾಮ ಪಂಚಾಯತ್ ಸದಸ್ಯರಾದ ಎ.ಬಿ. ಅಬ್ದುಲ್ಲಾ, ಸಿ.ಹೆಚ್ ರಝಾಕ್, ರಾಜೇಶ್ ಗೌಡ, ಬೊಳಂತೂರು ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರಶೇಖರ್ ರೈ ನಾರ್ಶ, ಅಶ್ರಫ್ ಸುರಿಬೈಲ್, ಅನ್ಸಾರ್ ಬಿ.ಜಿ, ಮಾಜಿ ಸದಸ್ಯ ಇಸ್ಮಾಯಿಲ್ ಕೊಕ್ಕಪ್ಪುಣಿ, ತಾಳಿತ್ತನೂಜಿ ಶಾಲಾಭಿವೃಧ್ದಿ ಸಮಿತಿಯ ಅಧ್ಯಕ್ಷ ಅಬ್ದುಲ್ ಖಾದರ್, ಪ್ರಮುಖರಾದ ಅಬೂಬಕ್ಕರ್ ಕುಲ್ಯಾರ್, ಜಮಾಲು ಬಾರೆಬೆಟ್ಟು , ಶಾಫಿ ತಾಳಿತ್ತನೂಜಿ, ಅನ್ಸಾರ್ ಬಾರೆಬೆಟ್ಟು, ಸಫ್ವಾನ್ ಮೊದಲಾದವರು ಅತಿಥಿಗಳಾಗಿ ಭಾಗವಹಿಸಿದ್ದರು.
ಇದೇ ವೇಳೆ ಗೌರವ ಡಾಕ್ಟರೇಟ್ ಪುರಸ್ಕೃತ ಮೋನು ಹಾಜಿ ಕಣಚೂರು. ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಗೋಪಾಲಕೃಷ್ಣ ನೇರಳಕಟ್ಟೆ, ಸಂಪಾಜೆ ಗ್ರಾ.ಪಂ. ಉಪಾಧ್ಯಕ್ಷ ಎಸ್.ಕೆ.ಹನೀಫ್, ಮಾಜಿ ಅಧ್ಯಕ್ಷ ಜಿ.ಕೆ. ಶಾಹುಲ್ ಹಮೀದ್ ಕಲ್ಲುಗುಂಡಿ, ಬೋಳಂತೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಯಾಕೂಬ್ ದಂಡೆಮಾರ್, ಆಂಬ್ಯುಲೆನ್ಸ್ ಚಾಲಕ ಆಸಿಫ್ ಕರೈ, ಶರೀಫ್ ಜಯನಗರ ಹಾಗೂ ವಿಶ್ವನಾಥ ಮೂಲ್ಯ ಇವರನ್ನು ಸನ್ಮಾನಿಸಲಾಯಿತು.
ಶಿಬಿರದಲ್ಲಿ 53 ಮಂದಿ ರಕ್ತದಾನ ಮಾಡಿದರು. ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ 218 ಮಂದಿ ವಿವಿಧ ರೀತಿಯ ತಪಾಸಣೆಯನ್ನು ನಡೆಸಿದರು. ಕೆ.ಪಿ. ಇಬ್ರಾಹೀಂ ಕರೀಂ ಕದ್ಕಾರ್ ಸ್ವಾಗತಿಸಿ, ನೌಫಲ್ ಕೆ.ಬಿ.ಎಸ್. ಕಾರ್ಯಕ್ರಮ ನಿರೂಪಿಸಿದರು.