ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರು ವಿಠ್ಠಲ್ ಕಿಣಿಗೆ ದ.ಕ. ಜಿಲ್ಲಾಡಳಿತದಿಂದ ಸನ್ಮಾನ

Update: 2023-08-09 13:12 GMT

ಮಂಗಳೂರು: ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಅಂಗವಾಗಿ ಗೋವಾ ಸ್ವಾತಂತ್ರ್ಯ ಹೋರಾಟಗಾರರಾದ ಮಟ್ಟಾರ್ ವಿಠ್ಠಲ್ ಕಿಣಿ ಅವರನ್ನು ನಗರದ ಭೋಜರಾವ್ ಲೈನ್‌ನಲ್ಲಿರುವ ಅವರ ಸ್ವಗೃಹದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಬುಧವಾರ ಸಂಜೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸನ್ಮಾನಿಸಿ, ಗೌರವಿಸಿದರು.

ವಿಠ್ಠಲ ಕಿಣಿ ಸೇರಿದಂತೆ ಹಲವು ಮಂದಿ ಸ್ವಾತಂತ್ರ್ಯ ಹೋರಾಟಗಾರರು ಸ್ವಾರ್ಥವನ್ನು ಬಿಟ್ಟು ಹೋರಾಡಿದ ಪರಿಣಾಮವಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿತು. ವಿಠ್ಠಲ ಕಿಣಿ ಅವರ ಮಾರ್ಗದರ್ಶನ ಇವತ್ತು ನಮಗೆ ಅಗತ್ಯ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್, ತಹಶೀಲ್ದಾರ್ ಪ್ರಶಾಂತ್ ಪಾಟೀಲ್ ಹಾಗೂ ಕಂದಾಯ ನಿರೀಕ್ಷಕ ಪ್ರಶಾಂತ್ ಪಕ್ಕಳ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News