ಸೆ.4ರಿಂದ ಸಚಿವ ಝಮೀರ್ ಅಹ್ಮದ್ ಖಾನ್ ದ.ಕ. ಜಿಲ್ಲಾ ಪ್ರವಾಸ

Update: 2023-09-03 17:26 GMT

ಮಂಗಳೂರು: ವಸತಿ , ವಕ್ಫ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಸಚಿವ ಬಿ.ಝೆಡ್. ಝಮೀರ್ ಅಹ್ಮದ್ ಖಾನ್ ಸೆ.4ರಿಂದ 6ರ ತನಕ ದ.ಕ.ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಸಚಿವರ ಪ್ರವಾಸದ ವಿವರ

ಸೆ.4ರಂದು ಮಧ್ಯಾಹ್ನ 2:55ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಸಂಜೆ 4:10ಕ್ಕೆ ಮಂಗಳೂರು ತಲುಪಲಿದ್ದಾರೆ. ರಾತ್ರಿ ಸರ್ಕ್ಯೂಟ್ ಹೌಸ್‌ನಲ್ಲಿ ವಾಸ್ತವ್ಯವಿರುತ್ತಾರೆ.

ಸೆ.5ರಂದು ಯೆನೆಪೋಯ ವಿವಿ ಕುಲಪತಿ ಹಾಜಿ ಯೆನೆಪೋಯ ಅಬ್ದುಲ್ಲ ಕುಂಞಿ ಆಯೋಜಿಸಿರುವ ಅಲ್ಪಸಂಖ್ಯಾತರ ಸಮುದಾಯದ ಮುಖಂಡರೊಂದಿಗೆ ಚರ್ಚೆಯಲ್ಲಿ ಭಾಗವಹಿಸಲಿರುವರು. ಬಳಿಕ ಟೌನ್‌ಹಾಲ್‌ನಲ್ಲಿ ಸಾರ್ವಜನಿಕ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 12:30ಕ್ಕೆ ಇಡ್ಕಿದು ಗ್ರಾಮದ ಮಿತ್ತೂರಿನಲ್ಲಿ ದಾರುಲ್ ಇರ್ಷಾದ್ ಆವರಣದಲ್ಲಿ ಪ್ರಧಾನ ಮಂತ್ರಿ ಜನ ವಿಕಾಸ ಯೋಜನೆಯಡಿ ಶಾಲಾ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಅಪರಾಹ್ನ 3:30ಕ್ಕೆ ಮಂಗಳೂರಿನಲ್ಲಿ ಹಜ್ ಭವನ ಕುರಿತು ಅಲ್ಪಸಂಖ್ಯಾತ ಮುಖಂಡರೊಂದಿಗೆ ಚರ್ಚೆ ನಡೆಸಲಿದ್ದಾರೆ. 6 ಗಂಟೆಗೆ ಉಳ್ಳಾಲದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆಯಲ್ಲಿ ಭಾಗವಹಿಸ ಲಿರುವ ಅವರು ರಾತ್ರಿ 7 ಗಂಟೆಗೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಲಿರುವರು. ರಾತ್ರಿ ಸರ್ಕ್ಯೂಟ್ ಹೌಸ್‌ನಲ್ಲಿ ವಾಸ್ತವ್ಯ.

ಸೆ.6ರಂದು ಬೆಳಗ್ಗೆ 10 ಗಂಟೆಗೆ ಕಣಚೂರು ಮೆಡಿಕಲ್ ಕಾಲೇಜು ಕ್ಯಾಂಪಸ್‌ನಲ್ಲಿ ಶಿಕ್ಷಕರ ದಿನಾಚರಣೆ ಮತ್ತು ರಕ್ತದಾನ ಶಿಬಿರ ಕಾರ್ಯಕ್ರಮದ ಉದ್ಘಾಟನೆ, 11 ಗಂಟೆಗೆ ದ.ಕ.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. 2 ಗಂಟೆಗೆ ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದಾರೆ. 3 ಗಂಟೆಗೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಸರ್ಫರಾಝ್ ಖಾನ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News